

ಬೆಂಗಳೂರು: ರಾಜ್ಯದಲ್ಲಿ ಕರೊನಾ ಸೋಂಕು ವ್ಯಾಪಿಸುತ್ತಿರುವುದು ನಿಯಂತ್ರಣಕ್ಕೆ ಸಿಗುತ್ತಿಲ್ಲ. ಒಂದೇ ತಿಂಗಳಲ್ಲಿ ನಾಲ್ಕನೇ ಬಾರಿಗೆ ಕೋವಿಡ್ ಪೀಡಿತರ ಸಂಖ್ಯೆ 8 ಸಾವಿರದ ಗಡಿ ದಾಟಿದೆ. ನಿನ್ನೆ ಒಟ್ಟು 8,580 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಜತೆಗೆ, ಒಟ್ಟು ಸೋಂಕಿತರ ಸಂಖ್ಯೆ 3 ಲಕ್ಷ ದಾಟಿದಂತಾಗಿದೆ.
ಸಾವಿನ ಸಂಖ್ಯೆ ಕೂಡ ಹೆಚ್ಚಾಗಿದ್ದು, ಒಟ್ಟು 133 ಜನರು ಮೃತಪಟ್ಟಿದ್ದಾರೆ. ಆ ಮೂಲಕ ಒಟ್ಟಾರೆ ಸಾವಿನ ಪ್ರಮಾಣವೂ 5 ಸಾವಿರ ದಾಟಿ, 5091ಕ್ಕೆ ತಲುಪಿದೆ. 7,249 ಜನರು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ಈವರೆಗೆ ಕೋವಿಡ್ನಿಂದ ಚೇತರಿಕೆ ಕಂಡವರ ಸಂಖ್ಯೆ 2,11,688 ಆಗಿದೆ. ಸದ್ಯ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 83,608ಕ್ಕೆ ತಲುಪಿದಂತಾಗಿದೆ. ಒಟ್ಟು 760 ಜನರು ಐಸಿಯುಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇನ್ನು, ರಾಜಧಾನಿಯಲ್ಲಿಯೂ ಮತ್ತೊಮ್ಮೆ ಸೋಂಕಿತರ ಸಂಖ್ಯೆ 3 ಸಾವಿರದ ಗಡಿ ದಾಟಿದೆ. ನಿನ್ನೆ ಒಟ್ಟು 3,284 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಒಟ್ಟು ಕೋವಿಡ್ ರೋಗಿಗಳ ಸಂಖ್ಯೆ 1,15,371 ಆಗಿದೆ.
ಇನ್ನೊಂದೆಡೆ, 31 ಜನರು ಸಾವಿಗೀಡಾಗುವ ಮೂಲಕ 1,786 ಜನರು ಈವರೆಗೆ ಮೃತಪಟ್ಟಿದ್ದಾರೆ. ಒಟ್ಟು 2,300 ಜನರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಸದ್ಯ ಸಕ್ರಿಯ ಕೇಸ್ಗಳ ಸಂಖ್ಯೆ 36,053ಕ್ಕೆ ಏರಿಕೆಯಾಗಿದೆ.
ಜಿಲ್ಲಾವಾರು ಕೋವಿಡ್ ವಿವರ