ಕೋವಿಡ್ ಪ್ರಕರಣ ಹೆಚ್ಚಳ; ಸಿದ್ಧತೆಗೆ ರಾಜ್ಯಗಳಿಗೆ ಸೂಚನೆ

covid illegal
Published on

ನವದೆಹಲಿ: ದೇಶದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಗಳಲ್ಲಿ ಆಮ್ಲಜನಕ, ಐಸೋಲೇಷನ್ ಹಾಸಿಗೆಗಳು, ವೆಂಟಿಲೇಟರ್​ಗಳು ಮತ್ತು ಅಗತ್ಯ ಔಷಧಗಳ ವ್ಯವಸ್ಥೆ ಮಾಡುವಂತೆ ಎಲ್ಲ ರಾಜ್ಯಗಳಿಗೆ ಕೇಂದ್ರ ಆರೋಗ್ಯ ಸಚಿವಾಲಯ ಸೂಚನೆ ನೀಡಿದೆ.

ಆರೋಗ್ಯ ಸೇವೆಗಳ ಮಹಾನಿರ್ದೇಶಕಿ ಡಾ. ಸುನಿತಾ ಶರ್ಮಾ ಅವರ ಅಧ್ಯಕ್ಷತೆಯಲ್ಲಿ ಎರಡು ದಿನ ಸರಣಿ ಸಭೆ ನಡೆದಿದ್ದು, ಸಭೆಯಲ್ಲಿ ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಪ್ರತಿನಿಧಿಗಳೊಂದಿಗೆ ಕೋವಿಡ್ ಎದುರಿಸಲು ಕೈಗೊಂಡಿರುವ ಅಗತ್ಯ ಸಿದ್ಧತೆಗಳ ಕುರಿತು ಪರಿಶೀಲನೆ ನಡೆಸಲಾಯಿತು.

ಜೂನ್ 4ರ ವೇಳೆಗೆ ದೇಶದಲ್ಲಿ 4302 ಸಕ್ರಿಯ ಪ್ರಕರಣಗಳು ವರದಿಯಾಗಿವೆ. 24 ಗಂಟೆಗಳ ಅವಧಿಯಲ್ಲಿ 864 ಹೊಸ ಪ್ರಕರಣಗಳು ಪತ್ತೆಯಾಗಿವೆ. ಹೆಚ್ಚಿನ ಕೋವಿಡ್ ಸೋಂಕಿತರು ಸೌಮ್ಯ ಗುಣಲಕ್ಷಣಗಳನ್ನು ಹೊಂದಿದ್ದು, ಮನೆಯಲ್ಲೇ ಆರೈಕೆ ಪಡೆಯುತ್ತಿದ್ದಾರೆ. ಈ ವರ್ಷದ ಜ.1ರಿಂದ ಇದುವರೆಗೆ ಕೋವಿಡ್​ನಿಂದಾಗಿ 44 ಜನರು ಮೃತಪಟ್ಟಿದ್ದಾರೆ, ಮೃತಪಟ್ಟವರಲ್ಲಿ ಹಲವರು ಅನಾರೋಗ್ಯದ ಸಮಸ್ಯೆ ಗಳಿಂದ ಬಳಲುತ್ತಿದ್ದರು ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net