

ಬೆಂಗಳೂರು: ವರ್ಷಾಂತ್ಯದಲ್ಲಿ ಮಹಾಮಾರಿ ಕೋವಿಡ್ ಮತ್ತೊಮ್ಮೆ ತನ್ನ ಆರ್ಭಟ ಶುರು ಮಾಡಿದ್ದು, ಇದರ ರೂಪಾಂತರ ತಳಿ JN.1 ವೈರಸ್ ಕರ್ನಾಟಕದಲ್ಲಿ ಕಾಣಿಸಿಕೊಂಡಿದೆ. ಕೋವಿಡ್ ಪಾಸಿಟಿವಿಟಿ ಪ್ರಮಾಣದಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದ್ದು, ಇದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಪ್ರತ್ಯೇಕ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.
ರಾಜ್ಯದಲ್ಲಿ ಈಗಾಗಲೇ 400ಕ್ಕೂ ಅಧಿಕ ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, 60 ವರ್ಷ ಮೇಲ್ಪಟ್ಟವರು ಹಾಗೂ ವಿವಿಧ ರೋಗಗಳಿಂದ ಬಳಲಲುತ್ತಿರುವವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ರಾಜ್ಯ ಸರ್ಕಾರ ಆದೇಶಿಸಿದೆ. ಸೋಂಕು ಹರಡುವಿಕೆ ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಿರುವ ಬೆನ್ನಲ್ಲೇ ಸರ್ಕಾರದಿಂದ ಕೋವಿಡ್ ಮಾರ್ಗಸೂಚಿ ಹೊರಡಿಸಲಾಗಿದೆ.