ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 568ಕ್ಕೆ

Covid
Published on

ಬೆಂಗಳೂರು: ರಾಜ್ಯದಲ್ಲಿ ಗುರುವಾರ 158 ಹೊಸ ಕೋವಿಡ್ ಸೋಂಕು ಪ್ರಕರಣಗಳು ವರದಿಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 568 ಹಾಗೂ ಸೋಂಕು ಪ್ರಮಾಣ ದರ ಶೇ. 1.89 ತಲುಪಿದೆ.

ಕಳೆದ 24 ಗಂಟೆಗಳಲ್ಲಿ 8,350 ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಬೆಂಗಳೂರಿನಲ್ಲಿ 85, ಮೈಸೂರು 12, ದಕ್ಷಿಣ ಕನ್ನಡ 8, ಚಾಮರಾಜನಗರ 7, ವಿಜಯನಗರ 6, ಬೆಂಗಳೂರು ಗ್ರಾಮಾಂತರ, ಮಂಡ್ಯ ಮತ್ತು ರಾಮನಗರದಲ್ಲಿ ತಲಾ 5, ಬಳ್ಳಾರಿ ಮತ್ತು ಶಿವಮೊಗ್ಗದಲ್ಲಿ ತಲಾ 4, ಚಿಕ್ಕಮಗಳೂರು ಮತ್ತು ಕೋಲಾರದಲ್ಲಿ ತಲಾ 3, ಚಿಕ್ಕಬಳ್ಳಾಪುರ, ಧಾರವಾಡ, ಗದಗ ಹಾಗೂ ಹಾಸನ ತಲಾ ಇಬ್ಬರು ಮತ್ತು ಬೀದರ್, ಕಲಬುರಗಿ, ಕೊಪ್ಪಳದಲ್ಲಿ ತಲಾ ಒಬ್ಬರಂತೆ 158 ಮಂದಿ ಸೋಂಕಿಗೆ ಒಳಗಾಗಿದ್ದಾರೆ.

ರಾಜ್ಯದಲ್ಲಿ 568 ಸಕ್ರಿಯ ಪ್ರಕರಣಗಳಲ್ಲಿ 514 ಸೋಂಕಿತರು ಮನೆ ಆರೈಕೆಗೆ ಒಳಗಾದ್ದು, 54 ಮಂದಿ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ಇವರಲ್ಲಿ 14 ಮಂದಿ ತುರ್ತು ನಿಗಾ ಘಟಕದಲ್ಲಿ ಹಾಗೂ 40 ಮಂದಿ ಸಾಮಾನ್ಯ ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net