ಕೋವಿಡ್​ ವಿಮೆ ವ್ಯಾಪ್ತಿಯಲ್ಲಿ ಪತ್ರಕರ್ತರನ್ನು ಸೇರಿಸಲು ಎಚ್​ಡಿಕೆ ಪಟ್ಟು

HDK 18 Feb 20
Published on

ಬೆಂಗಳೂರು: ಕಾರ್ಯನಿರತ ಪತ್ರಕರ್ತರನ್ನು(ದೃಶ್ಯ ಮತ್ತು ಮುದ್ರಣ) ಕೋವಿಡ್ ವಿಮೆ ವ್ಯಾಪ್ತಿಗೆ ಒಳಪಡಿಸಬೇಕು ಎಂದು ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಕರೊನಾ ಸೋಂಕು ತಗುಲಿದ ಪತ್ರಕರ್ತರಿಗೆ ಖಾಸಗಿ ಆಸ್ಪತ್ರೆಗಳಲ್ಲೂ ಉಚಿತವಾಗಿ ಚಿಕಿತ್ಸೆ ಒದಗಿಸಲು ರಾಜ್ಯಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿರುವ ಎಚ್​ಡಿಕೆ, ಪತ್ರಕರ್ತರನ್ನು ಕೇವಲ ಹೆಸರಿಗೆ ಮಾತ್ರ ಕರೊನಾ ವಾರಿಯರ್ಸ್ ಎಂದು ಘೋಷಿಸಲಾಗಿದೆ ಎಂದು ಟ್ವೀಟ್​ ಮೂಲಕ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕರೊನಾ ವಾರಿಯರ್ಸ್ ಎಂದು ಪತ್ರಕರ್ತರನ್ನು ಹೆಸರಿಗಷ್ಟೇ ಹೇಳಲಾಗಿದೆ. ಅವರಿಗೆ ಯಾವುದೇ ರೀತಿಯ ವಿಮೆ ಸೌಲಭ್ಯವನ್ನೂ ನೀಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿರುವ ಎಚ್​ಡಿಕೆ, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರಿಗೂ ಕೋವಿಡ್​ ವಿಮೆ ಅನ್ವಯ ಆಗಬೇಕು ಎಂದು ಆಗ್ರಹಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net