ಕೌ ಮ್ಯಾಟ್ ಸೌಲಭ್ಯಕ್ಕೆ ಅರ್ಜಿ ಆಹ್ವಾನ

Published on

ಹಾವೇರಿ: ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ವತಿಯಿಂದ 2023-24ನೇ ಸಾಲಿನ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಕೌ ಮ್ಯಾಟ್ ಸೌಲಭ್ಯಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಯ್ಕೆಯಾಗುವ ಪ್ರತಿ ಫಲಾನುಭವಿಗೆ ಎರಡು ಕೌ ಮ್ಯಾಟ್ ವಿತರಣೆ ಮಾಡಲಾಗುವುದು. ಘಟಕದ ವೆಚ್ಚ 2799 ರೂ. ಇದು,್ದ ಶೇ. 50 ರ ಸಹಾಯಧನ (1399.50ರೂ.) ಮತ್ತು ಶೇ. 50 ಫಲಾನುಭವಿ ವಂತಿಗೆ (1399.50ರೂ.) ಯೊಂದಿಗೆ ಯೋಜನೆ ಅನು?್ಠಾನಗೊಳಿಸಲಾಗುವುದು.
ವಿತರಣೆ ವಿವರ: ಬ್ಯಾಡಗಿ, ಹಾವೇರಿ, ಹಾನಗಲ್ಲ, ರಾಣೇಬೆನ್ನೂರ ಹಾಗೂ ಸವಣೂರ ತಾಲೂಕಿಗೆ ತಲಾ 50, ಹಿರೇಕೆರೂರು ಹಾಗೂ ರಟ್ಟಿಹಳ್ಳಿ ತಾಲೂಕಿಗೆ ತಲಾ 60 ಹಾಗೂ ಶಿಗ್ಗಾಂವಿ ತಾಲೂಕಿಗೆ 100 ಮ್ಯಾಟ್ ವಿತರಣೆ ಗುರಿ ನಿಗದಿಪಡಿಸಲಾಗಿದೆ. ಅರ್ಜಿ ನಮೂನೆಗಳನ್ನು ಹತ್ತಿರದ ಪಶುವೈದ್ಯ ಸಂಸ್ಥೆಗಳಿಂದ ಪಡೆದು ಭರ್ತಿ ಮಾಡಿ, ಆಧಾರ ಕಾರ್ಡ್, ಸ್ಥಳೀಯ ಪಶುವೈದ್ಯ ಸಂಸ್ಥೆಗಳಿಂದ ಪಡೆದ ಜಾನುವಾರು ದೃಢೀಕರಣ ಪತ್ರ, ಪಡಿತರ ಚೀಟಿ ಹಾಗೂ ಜಾತಿ ಪ್ರಮಾಣ (ಪ.ಜಾ ಮತ್ತು ಪ.ಪಂ ಫಲಾನುಭವಿಗಳಿಗೆ ಮಾತ್ರ) ಪತ್ರಗಳ ನಕಲು ಪ್ರತಿಗಳೊಂದಿಗೆ ತಾಲೂಕಿನ ಪಶು ಆಸ್ಪತ್ರೆಯಲ್ಲಿ ಆ. 22ರೊಳಗೆ ಸಲ್ಲಿಸಬೇಕು.
ಅರ್ಜಿ ನಮೂನೆ ಮತ್ತು ಹೆಚ್ಚಿನ ಮಾಹಿತಿಗಾಗಿ ತಾಲೂಕಿನ ಮುಖ್ಯ ಪಶು ವೈದ್ಯಾಧಿಕಾರಿಗಳು (ಆಡಳಿತ) ಅಥವಾ ಹತ್ತಿರದ ಪಶುವೈದ್ಯ ಸಂಸ್ಥೆಗಳಿಗೆ ಸಂಪರ್ಕಿಸಲು ಮತ್ತು ಜಿಲ್ಲೆಯ ರೈತರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಲು ಪಶುಪಾಲನೆ ಮತ್ತು ಪಶುವೈದ್ಯ ಸೇವಾ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net