ಜಾನುವಾರುಗಳ ಅಕ್ರಮ ಸಾಗಣೆ ನಿಷೇಧ

BAKRID MEETING.
ಎನ್.ಆರ್.ಪುರ ತಾಪಂ ಕಚೇರಿಯಲ್ಲಿ ಟಾಸ್‌‌ಕೆೆರ್ಸ್ ಸಭೆ ನಡೆಯಿತು. ಗುರುದತ್ ಕಾಮತ್, ಬಿ.ಎಸ್.ನಿರಂಜನಗೌಡ, ಎನ್.ಎಲ್.ಮನೀಶ, ಆರ್.ವಿ.ಮಂಜುನಾಥ್ ಇದ್ದರು.
Published on

ಎನ್.ಆರ್.ಪುರ: ಜಿಲ್ಲಾಧಿಕಾರಿ ಆದೇಶದಂತೆ ಜೂ.16 ಮತ್ತು 17 ರಂದು ನಡೆಯಲಿರುವ ಬಕ್ರಿದ್ ಹಬ್ಬದ ಸಮಯದಲ್ಲಿ ಜಾನುವಾರು ಮತ್ತು ಒಂಟೆಗಳನ್ನು ಅಕ್ರಮವಾಗಿ ದಾಸ್ತಾನು, ಸಾಗಣೆ ಮತ್ತು ವಧೆ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಸಿಪಿಐ ಗುರುದತ್ ಕಾಮತ್ ತಿಳಿಸಿದರು.
ಬಕ್ರಿದ್ ಹಬ್ಬದ ಹಿನ್ನೆಲೆಯಲ್ಲಿ ಬುಧವಾರ ತಾಪಂಯಲ್ಲಿ ನಡೆದ ಟಾಸ್‌‌ಕೆೆರ್ಸ್ ಸಭೆಯಲ್ಲಿ ಮಾತನಾಡಿ, ಜಿಲ್ಲಾದ್ಯಂತ ವಿವಿಧ ಇಲಾಖೆಗಳ ಅಧಿಕಾರಿಗಳನ್ನೊಳಗೊಂಡ ತಪಾಸಣಾ ತಂಡಗಳನ್ನು ರಚಿಸಲಾಗಿದೆ. ಈ ನಿಟ್ಟಿನಲ್ಲಿ ಪಪಂ, ತಾಪಂ, ಕಂದಾಯ ಇಲಾಖೆ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿಕೊಂಡು ಕಾರ್ಯನಿರ್ವಹಿಸಲಾಗುವುದು. ಬೇರೆ ಇಲಾಖೆ ಅಧಿಕಾರಿಗಳಿಗೆ ಪ್ರಾಣಿ ವಧೆ ಮಾಹಿತಿ ಬಂದಲ್ಲಿ ನಮಗೆ ತಿಳಿಸಿ, ಪೊಲೀಸ್ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ತೆರಳಬೇಕು. ದಾಳಿ ವೇಳೆ ಸ್ಥಳದಲ್ಲಿ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸೋಣ. ಎಲ್ಲರೂ ಒಗ್ಗೂಡಿ ಈ ಕಾರ್ಯ ಮಾಡೋಣ ಎಂದು ಇಲಾಖಾಧಿಕಾರಿಗಳಿಗೆ ತಿಳಿಸಿದರು. ಪಶುವೈದ್ಯ ಇಲಾಖೆ ವೈದ್ಯಾಧಿಕಾರಿ ಶಿವಕುಮಾರ್ ಮಾತನಾಡಿ, ಪಟ್ಟಣದಲ್ಲಿ ಬಿಡಾಡಿ ಜಾನುವಾರುಗಳ ಹಾವಳಿ ಹೆಚ್ಚಾಗಿದೆ. ಜಾನುವಾರುಗಳನ್ನು ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿಕೊಳ್ಳಬೇಕೆಂದು ಮಾಲೀಕರಿಗೆ ತಿಳಿಸಬೇಕು. ಈ ಬಗ್ಗೆ ಪ್ರಚಾರ ಮಾಡಬೇಕು. ಆದರೂ ಬಿಡಾಡಿ ಜಾನುವಾರುಗಳು ರಸ್ತೆಯಲ್ಲಿ ಕಂಡುಬಂದಲ್ಲಿ ಯಾವುದೇ ಮುನ್ಸೂಚನೆ ನೀಡದೆ ಗೋಶಾಲೆಗೆ ರವಾನಿಸಬೇಕು ಎಂದರು. ಪಿಎಸ್‌ಐ ಬಿ.ಎಸ್.ನಿರಂಜನ್ ಗೌಡ, ತಾಪಂ ನರೇಗಾ ಸಹಾಯಕ ನಿರ್ದೇಶಕ ಎನ್.ಎಲ್.ಮನೀಶ, ಪಪಂ ಮುಖ್ಯಾಧಿಕಾರಿ ಆರ್.ವಿ.ಮಂಜುನಾಥ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net