

ಬೆಂಗಳೂರು: ಸಿಪಿಐ(ಎಂ) (CPI) ನಾಯಕ, ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯಾಧ್ಯಕ್ಷರಾದ ಜಿ.ಸಿ.ಬಯ್ಯಾರೆಡ್ಡಿ ಅವರು ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಶನಿವಾರ (ಜನವರಿ 04) ಮುಂಜಾನೆ ಜಯನಗರದ ಅಪೋಲೋ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆಯವರಾದ ಬಯ್ಯಾರೆಡ್ಡಿ ಅವರು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಬಯ್ಯಾರೆಡ್ಡಿ ಅವರು ಕಳೆದ ಕೆಲ ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬಯ್ಯಾರೆಡ್ಡಿ ಅವರ ಅಂತಿಮ ದರ್ಶನಕ್ಕೆ ಬೆಂಗಳೂರಿನಲ್ಲಿರುವ ಪಕ್ಷದ ರಾಜ್ಯ ಕಚೇರಿಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಬಯ್ಯಾರೆಡ್ಡಿ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿ ಟ್ವೀಟ್ ಮಾಡಿದ್ದಾರೆ. ಸಿಪಿಐ(ಎಂ) ನಾಯಕ ಮತ್ತು ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯಾಧ್ಯಕ್ಷರಾದ ಜಿ.ಸಿ.ಬಯ್ಯಾರೆಡ್ಡಿ ಅವರ ನಿಧನದದಿಂದ ದು:ಖಿತನಾಗಿದ್ದೇನೆ. ಆತ್ಮೀಯ ಸ್ನೇಹಿತರಾಗಿದ್ದ ಬಯ್ಯಾರೆಡ್ಡಿಯವರು ಭೇಟಿಯಾದಾಗೆಲ್ಲ ದೇಶದ ರೈತರು ಮತ್ತು ಕಾರ್ಮಿಕರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಮಾತನಾಡುತ್ತಿದ್ದರು. ಈ ಸಮುದಾಯಗಳಿಗೆ ನ್ಯಾಯ ಕೊಡಿಸಲು ತಮ್ಮ ಬದುಕನ್ನು ಅರ್ಪಿಸಿಕೊಂಡಿದ್ದ ಬಯ್ಯಾರೆಡ್ಡಿಯವರು ಒಬ್ಬ ದಣಿವರಿಯದೆ ಇದ್ದ ಜನಪರ ಹೋರಾಟಗಾರ. ಅವರ ಕುಟುಂಬ ವರ್ಗ ಮತ್ತು ಹಿತೈಷಿಗಳ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.