ಸಿಪಿಐ ಕಾರ್ಯಕರ್ತನ ಹತ್ಯೆ ಪ್ರಕರಣ; 9 ಆರ್​ಎಸ್​ಎಸ್​ ಕಾರ್ಯಕರ್ತರಿಗೆ ಜೀವಾವಧಿ ಶಿಕ್ಷೆ

dk - 2025-01-07T170712.996
Published on

ಕೇರಳ: ಕಣ್ಣೂರಿನಲ್ಲಿ 19 ವರ್ಷಗಳಿಂದೆ ನಡೆದ ಸಿಪಿಐ ಕಾರ್ಯಕರ್ತರ ಹತ್ಯೆಗೆ ಸಂಬಂಧಪಟ್ಟಂತೆ 9 ಜನ ರಾಷ್ಟ್ರೀಯ ಸ್ವಯಂ ಸೇವ ಸಂಘದ (RSS) ಕಾರ್ಯಕರ್ತರಿಗೆ ಇಲ್ಲಿನ ತಲಶ್ಶೇರಿಯ ನ್ಯಾಯಾಲಯ ಮಂಗಳವಾರ ಜೀವಾವಧಿ ಶಿಕ್ಷೆ ವಿಧಿಸಿದೆ.

ಕನ್ನಪುರಂ ಚುಂಡಾದ 25 ವರ್ಷದ ಸಿಪಿಐ(ಎಂ) ಸದಸ್ಯ ರಿಜಿತ್ ಅವರನ್ನು 2005ರ ಅಕ್ಟೋಬರ್ 3ರಂದು ಚುಂಡಾದ ದೇವಸ್ಥಾನದ ಬಳಿ ಹೊಂಚು ಹಾಕಿ ಹತ್ಯೆ ಮಾಡಲಾಗಿತ್ತು.

ಪ್ರಕರಣ ಏನು?

ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮತ್ತು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ನಡುವಿನ ರಾಜಕೀಯ ಉದ್ವಿಗ್ನತೆಯ ಅವಧಿಯಲ್ಲಿ ಈ ದಾಳಿ ನಡೆದಿದೆ. ರಿಜಿತ್ ಮನೆಗೆ ನಡೆದುಕೊಂಡು ಹೋಗುತ್ತಿದ್ದಾಗ ಆರ್‌ಎಸ್‌ಎಸ್ ಕಾರ್ಯಕರ್ತರ ಗುಂಪು ಶಸ್ತ್ರಾಸ್ತ್ರಗಳನ್ನು ಹೊಂದಿದ್ದು, ಬಾವಿಯ ಬಳಿ ಅವರ ಮತ್ತು ಅವರ ಸ್ನೇಹಿತರ ಮೇಲೆ ಹಲ್ಲೆ ನಡೆಸಿತು. ರಿಜಿತ್ ಗಾಯಗೊಂಡು ಸಾವನ್ನಪ್ಪಿದರೆ, ಅವರ ಮೂವರು ಸ್ನೇಹಿತರು ಹಲ್ಲೆಯಲ್ಲಿ ಗಾಯಗೊಂಡಿದ್ದಾರೆ.

ಇದೇ ಜನವರಿ 4ರಂದು ತಲಶ್ಶೇರಿಯ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಆರೋಪಿಯನ್ನು ತಪ್ಪಿತಸ್ಥ ಎಂದು ತೀರ್ಪು ನೀಡಿತ್ತು. ಆರಂಭದಲ್ಲಿ ಆರೋಪಿಸಲಾದ 10 ಜನರಲ್ಲಿ ಒಬ್ಬರು ಪ್ರಕರಣದ ವಿಚಾರಣೆಯ ಸಮಯದಲ್ಲಿ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದರು.

ಒಂಬತ್ತು ಅಪರಾಧಿಗಳಲ್ಲಿ ಸುಧಾಕರನ್ (57), ಜಯೇಶ್ (41), ರಂಜಿತ್ (44), ಅಜೀಂದ್ರನ್ (51), ಅನಿಲ್‌ಕುಮಾರ್ (52), ರಾಜೇಶ್ (46), ಶ್ರೀಕಾಂತ್ (47), ಶ್ರೀಜಿತ್ (43), ಭಾಸ್ಕರನ್ ( 67) ಶಿಕ್ಷೆಗೆ ಒಳಪಟ್ಟಿದ್ದಾರೆ.(ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net