ಗ್ರಾಮೀಣ ಭಾಗದಲ್ಲಿ ಮಧುಮೇಹ ಜಾಗೃತಿ ಮೂಡಿಸಿ

shugar
ಮಧುಮೇಹ ನಿಯಂತ್ರಣ ಕುರಿತು ಕಾರ್ಯಾಗಾರದಲ್ಲಿ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು. ಜಿ.ಕೆ.ಮಿಥುನ್‌ಕುಮಾರ್, ಡಾ. ಕೆ.ಎಸ್.ನಟರಾಜ್, ಡಾ. ಪೃಥ್ವಿ, ಡಾ. ಒ.ಮಲ್ಲಪ್ಪ ಇತರರಿದ್ದರು.
Published on

ಶಿವಮೊಗ್ಗ: ಗ್ರಾಮೀಣ ಭಾಗದಲ್ಲಿ ಜನರ ಸಮೀಪವಿದ್ದು ಆರೋಗ್ಯ ಸೇವೆ ಸಲ್ಲಿಸುವ ಆಶಾ ಕಾರ್ಯಕರ್ತೆಯರು ಮಧುಮೇಹದ ಬಗ್ಗೆಯೂ ಜಾಗೃತಿ ಮೂಡಿಸಬೇಕು ಎಂದು ಎಸ್ಪಿ ಜಿ.ಕೆ.ಮಿಥುನ್‌ಕುಮಾರ್ ಹೇಳಿದರು.

ಆರೋಗ್ಯ ಇಲಾಖೆ ಹಾಗೂ ವಿನ್‌ಲೈಫ್ ಟ್ರಸ್ಟ್‌ನಿಂದ ಮಂಗಳವಾರ ಜಿಲ್ಲೆಯ ಆಶಾ ಕಾರ್ಯಕರ್ತೆಯರಿಗೆ ಮಧುಮೇಹ ಮತ್ತು ತುರ್ತು ಜೀವ ರಕ್ಷಕ (ಸಿಪಿಆರ್) ಕುರಿತು ಆಯೋಜಿಸಿದ್ದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಕರೊನಾ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆಯರು ಜೀವಭಯ ತೊರೆದು ಮನೆ ಮನೆಗೆ ತೆರಳಿ ಜಾಗೃತಿ ಮೂಡಿಸಿದ್ದರು. ಈಗ ಅವರು ಸಕ್ಕರೆ ಕಾಯಿಲೆ ಬಗ್ಗೆ ಜಾಗೃತಿ ಮೂಡಿಸುವುದು ಕಷ್ಟವೇನಲ್ಲ. ಮಧುಮೇಹ ನಮ್ಮ ಜೀವನ ಶೈಲಿಗೆ ಸಂಬಂಧಿಸಿದ ಕಾಯಿಲೆ. ಬದಲಾದ ಜೀವನಶೈಲಿಯ ಕಾರಣಕ್ಕೆ ಮಧುಮೇಹ ಸಾಮಾನ್ಯ ಎನ್ನುವಂತಾಗಿದೆ. ಇದನ್ನು ನಿರ್ಲಕ್ಷ್ಯ ಮಾಡುವಂತಿಲ್ಲ. ಇದನ್ನು ಸರಿಯಾಗಿ ನಿರ್ವಹಣೆ ಮಾಡಿಕೊಂಡರೆ ಆತಂಕವಿಲ್ಲದೆ ಬದುಕುಬಹುದು ಎಂದು ತಿಳಿಸಿದರು.

ಜಿಲ್ಲಾ ಆರೋಗ್ಯಾಧಿಕಾರಿ ಡಾ. ಕೆ.ಎಸ್.ನಟರಾಜ್, ಭಾರತದಂತಹ ದೇಶದಲ್ಲಿ ಮಧುಮೇಹ ಸಾಮಾನ್ಯ. ಯುವಜನರಲ್ಲಿ ಇದು ಈಗ ಹೆಚ್ಚಾಗುತ್ತಿದೆ. ಪರೀಕ್ಷೆ ನಡೆಸಿದರೆ ಶೇ.18ರಿಂದ 20ರಷ್ಟು ಜನರಿಗೆ ಮಧುಮೇಹ ಇರುತ್ತದೆ. ಇದಕ್ಕೆ ಪ್ರಮುಖ ಕಾರಣ ಬದಲಾದ ಜೀವನಶೈಲಿ. ನಾವು ನಮ್ಮ ಜೀವನ ಶೈಲಿಯನ್ನು ಬದಲಾಯಿಸಿಕೊಳ್ಳುವುದೇ ಇದಕ್ಕೆ ಪರಿಹಾರ ಎಂದರು.

ಡಾ. ಪಿ.ಲಕ್ಷ್ಮೀನಾರಾಯಣ ಆಚಾರ್, ಆರ್‌ಸಿಎಚ್ ಅಧಿಕಾರಿ ಡಾ. ಒ.ಮಲ್ಲಪ್ಪ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ನಾಗರಾಜ್ ನಾಯ್ಕ, ಡಾ. ಬಿ.ಸಿ.ಪೃಥ್ವಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net