ಜಿಲ್ಲಾಧಿಕಾರಿ ದಯಾನಂದ್ ಹೆಸರಿನಲ್ಲಿ ನಕಲಿ ವಾಟ್ಸ್‌ಆ್ಯಪ್ ಖಾತೆ ಸೃಷ್ಟಿ

Cheating to retired bank employ
Published on

ಬೆಂಗಳೂರು: ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಎ. ದಯಾನಂದ್ ಅವರ ಫೋಟೋ ಮತ್ತು ಹೆಸರು ದುರ್ಬಳಕೆ ಮಾಡಿಕೊಂಡಿರುವ ಕಿಡಿಗೇಡಿಗಳು ಸಂದೇಶಗಳನ್ನು ಕಳುಹಿಸಿ ಹಣಕ್ಕೆ ಬೇಡಿಕೆ ಇಟ್ಟಿರುವ ಪ್ರಕರಣ ಬೆಳಕಿಗೆ ಬಂದಿದ್ದು, ಈ ಸಂಬಂಧ ಕೇಂದ್ರ ವಿಭಾಗದ ಸಿಎಎನ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಜಿಲ್ಲಾಧಿಕಾರಿ ದಯಾನಂದ್ ಅವರು ನೀಡಿದ ದೂರಿನ ಮೇರೆಗೆ ಕೇಂದ್ರ ವಿಭಾಗದ ಪೊಲೀಸರು ವಂಚನೆ ಪ್ರಕರಣ ದಾಖಲಿಸಿಕೊಂಡು ಅಪರಿಚಿತ ವ್ಯಕ್ತಿಗಳ ವಿರುದ್ಧ ತನಿಖೆ ಮುಂದುವರಿಸಿದ್ದಾರೆ. ದಯಾನಂದ್ ಅವರ ಫೋಟೋ ದುರ್ಬಳಕೆ ಮಾಡಿಕೊಂಡಿರುವ ಆರೋಪಿಗಳು, ಅವರ ಹೆಸರಿನಲ್ಲಿ ವಾಟ್ಸ್‌ಆ್ಯಪ್ ಸಂಖ್ಯೆಯೊಂದನ್ನು ಸೃಷ್ಟಿಸಿದ್ದಾರೆ. ಅದೇ ಸಂಖ್ಯೆಯಿಂದ ಜಿಲ್ಲಾಡಳಿತದ ಹಲವು ಇಲಾಖೆಗಳ ಅಧಿಕಾರಿಗಳು ಹಾಗೂ ಇತರರಿಗೆ ಸಂದೇಶ ಕಳುಹಿಸಿದ್ದಾರೆ. ಆಗ ತುರ್ತು ಅಗತ್ಯಕ್ಕೆ ಹಣ ಬೇಕಿದೆ. ಈ ಕೂಡಲೇ ಕಳುಹಿಸಿ ಎಂದು ಆರೋಪಿಗಳು ಸಂದೇಶದಲ್ಲಿ ಬರೆದಿದ್ದರು. ಅನುಮಾನಗೊಂಡ ಕೆಲ ಅಧಿಕಾರಿಗಳು, ಜಿಲ್ಲಾಧಿಕಾರಿ ದಯಾನಂದ ಅವರ ಗಮನಕ್ಕೆ ತಂದಿದ್ದಾರೆ. ಈ ಬಗ್ಗೆ ದಯಾನಂದ್ ಅವರು ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net