

Pushpa 2: ಪುಷ್ಪಾ 2 ಸಿನಿಮಾ ಟ್ರೇಲರ್ ಧೂಳೆಬ್ಬಿಸುತ್ತಿದೆ. ಸುಕುಮಾರ್ ನಿರ್ದೇಶನದಲ್ಲಿ ಅಲ್ಲು ಅರ್ಜುನ್, ಫಹದ್ ಫಾಸಿಲ್ ಮತ್ತು ರಶ್ಮಿಕಾ ಮಂದಣ್ಣ ನಟಿಸಿರುವ ಈ ಚಿತ್ರದ ಟ್ರೇಲರ್ ಭಾನುವಾರ ಬಿಡುಗಡೆಯಾಗಿದೆ. ಈ ಟ್ರೈಲರ್ ಈಗಾಗಲೇ ದಾಖಲೆಗಳನ್ನು ಮುರಿದಿದೆ.
YouTube ನಲ್ಲಿ 40 ಮಿಲಿಯನ್ ವೀಕ್ಷಣೆಗಳನ್ನು ಪಡೆದಿದ್ದು, ಇದು 1.4 ಮಿಲಿಯನ್ ಲೈಕ್‌ಗಳನ್ನು ಗಳಿಸಿದೆ. ಎಲ್ಲಿ ನೋಡಿದರೂ, ಎಲ್ಲಿ ಕೇಳಿದರೂ ಜನ ಈ ಟ್ರೈಲರ್ ಬಗ್ಗೆಯೇ ಮಾತನಾಡಿಕೊಳ್ಳುತ್ತಿದ್ದಾರೆ. ಬೆರಗುಗೊಳಿಸುವ ದೃಶ್ಯಗಳು, ಹಿನ್ನೆಲೆ ಸಂಗೀತ ಮತ್ತು ಅಲ್ಲು ಅರ್ಜುನ್, ರಶ್ಮಿಕಾ ಅಭಿನಯದೊಂದಿಗೆ, ಈ ಟ್ರೇಲರ್ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.
ಪುಷ್ಪ 2 ಟ್ರೇಲರ್‌ನಲ್ಲಿ ಅಲ್ಲು ಅರ್ಜುನ್ ಕೆಂಪು ಚಂದನದ ಕಳ್ಳಸಾಗಣೆದಾರನಾಗಿ ಮತ್ತು ರಶ್ಮಿಕಾ ಅವರ ಪತ್ನಿಯಾಗಿ ಕಾಣಿಸಿಕೊಂಡಿದ್ದಾರೆ. ಟ್ರೇಲರ್‌ನಲ್ಲಿ ನಿರ್ದೇಶಕ ಸುಕುಮಾರ್ ಡ್ರಾಮಾ, ಮಿಸ್ಟರಿ, ಆಕ್ಷನ್, ಸಂಗೀತ, ಪ್ರಣಯ, ಸಂಸ್ಕೃತಿ ಹೀಗೆ ಎಲ್ಲ ಅಂಶಗಳನ್ನು ಒಳಗೊಂಡಿದೆ. ನಟ ಫಹಾದ್ ಫಾಸಿಲ್ ಪ್ರಬಲ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಪುಷ್ಪಾ 2: ರೂಲ್ ಟ್ರೈಲರ್ ತುಂಬಾ 'ವೈಲ್ಡ್' ಆಗಿದೆ ಎಂದು ಪ್ರೇಕ್ಷಕರು ಹೇಳುತ್ತಿದ್ದಾರೆ. ಆದರೆ ಆಸ್ಟ್ರೇಲಿಯಾ ಕ್ರಿಕೆಟಿಗರೊಬ್ಬರು ಕೂಡಾ ಈ ಸಿನಿಮಾದ ಟ್ರೆಲರ್ ಕುರಿತಾಗಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಆಸ್ಟ್ರೇಲಿಯಾ ಕ್ರಿಕೆಟಿಗ ಡೇವಿಡ್ ವಾರ್ನರ್ ಪುಷ್ಪ 2 ಟ್ರೈಲರ್ ಗೆ ಪ್ರತಿಕ್ರಿಯಿಸಿದ್ದಾರೆ. ಅಲ್ಲು ಅರ್ಜುನ್ ಅವರನ್ನು ಇನ್‌ಸ್ಟಾದಲ್ಲಿ ಟ್ಯಾಗ್ ಮಾಡುವ ಮೂಲಕ ಉತ್ತಮ ಕೆಲಸ ಬ್ರದರ್ ಎಂದು ಅಭಿನಂದಿಸಿದ್ದಾರೆ. ಇದೀಗ ಈ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಈ ಪೋಸ್ಟ್ ವೈರಲ್ ಆಗುತ್ತಿದ್ದಂತೆ ನೆಟಿಜನ್‌ಗಳು ವಿಭಿನ್ನವಾಗಿ ಪ್ರತಿಕ್ರಿಯಿಸುತ್ತಿದ್ದಾರೆ. ಪುಷ್ಪ ಎಂದರೆ ರಾಷ್ಟ್ರೀಯ ಅಥವಾ ಅಂತರಾಷ್ಟ್ರೀಯ ಎಂಬ ಕಾಮೆಂಟ್ ಗಳು ಬರುತ್ತಿವೆ.