ಹುಬ್ಬಳ್ಳಿ | ಮನೆಯಲ್ಲಿ ಯಾರೂ ಇಲ್ಲದ ಸಮಯ ನೋಡಿಕೊಂಡು ಜೀವ ಕೊನೆಗೊಳಿಸಿದ ಸಹೋದರಿಯರು!

Police
Published on

ಹುಬ್ಬಳ್ಳಿ: ಸಹೋದರಿಯರಿಬ್ಬರು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಘಟಗಿಯ ಬೆಂಡಿಗೇರಿ ಓಣಿಯಲ್ಲಿರುವ ಬಾಡಿಗೆ ಮನೆಯೊಂದರಲ್ಲಿ ನಡೆದಿದೆ. ಕಾವೇರಿ ಹಡಪದ (17) ಭೂಮಿಕಾ ಹಡಪದ (19) ಸಾವಿಗೆ ಶರಣಾದ ಸಹೋದರಿಯರು.

ಮನೆಯಲ್ಲಿ ತಾಯಿ ಇಲ್ಲದ ಸಮಯದಲ್ಲಿ ನೇಣು ಬಿಗಿದುಕೊಂಡು ಸಹೋದರಿಯರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರ ತನಿಖೆಯಿಂದ ಸಹೋದರಿಯರು ಆತ್ಮಹತ್ಯೆ ಮಾಡಿಕೊಳ್ಳಲು ಕಾರಣ ಏನು ಎಂಬ ಪ್ರಶ್ನೆಗೆ ಉತ್ತರ ಸಿಗಬೇಕಿದೆ.

ಉದ್ಯೋಗ ಸಿಗಲಿಲ್ಲವೆಂದು ಮನನೊಂದ ಯುವತಿ ಸಾವಿಗೆ ಶರಣು!

ಉಡುಪಿ: ಪದವಿ ಶಿಕ್ಷಣ ಮುಗಿದಿದ್ದರೂ, ಉದ್ಯೋಗ ಸಿಗಲಿಲ್ಲವೆಂದು ಬೇಸತ್ತ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೇ.29ರಂದು ನಡೆದಿದೆ. ಬೈಂದೂರಿನ ಕಾಲ್ನೋಡು ಗ್ರಾಮದ ಗೌತಮಿ(22) ಸಾವಿಗೆ ಶರಣಾದ ಯುವತಿ.

ಮೃತ ಯುವತಿ ಗೌತಮಿ ಉಡುಪಿಯ ಖಾಸಗಿ ಕಾಲೇಜಿನಲ್ಲಿ ಎಂ.ಕಾಂ ಪೂರ್ಣಗೊಳಿಸಿದ್ದಳು. ಬಳಿಕ ಬ್ಯಾಂಕಿಂಗ್ ಪರೀಕ್ಷೆ ಬರೆದಿದ್ದಾಳೆ. ಜತೆಗೆ ಕೆಲ ಕಂಪನಿಗಳ ಉದ್ಯೋಗ ನೇಮಕಾತಿಗೆ ಅರ್ಜಿ ಸಲ್ಲಿಸಿದ್ದಳು. ಆದರೆ ಎಲ್ಲೂ ಉದ್ಯೋಗ ಸಿಕ್ಕಿರಲಿಲ್ಲ. ಇದರಿಂದಾಗಿ ಕೆಲ ಸಮಯದಿಂದ ಖಿನ್ನತೆಗೆ ಒಳಗಾಗಿದ್ದಳು. ಗೌತಮಿ ಡೆತ್​ನೋಟ್​ ಬರೆದಿಟ್ಟು, ಮನೆಯ ಮೊದಲ ಮಹಡಿಯಲ್ಲಿ ನೇಣು ಬಿಗಿದುಕೊಂಡಿದ್ದಾಳೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net