ತುಮಕೂರು | ಕತ್ತು ಕೊಯ್ದು ಯುವತಿ ಕೊಲೆ; ಕೆಲಸ ಮುಗಿಸಿ ಮನೆಗೆ ಬಂದಿದ್ದ ರೂಂಮೇಟ್​ಗಳಿಗೆ ಕಾದಿತ್ತು ಶಾಕ್!

Crime News
Published on

ತುಮಕೂರು: ದುಷ್ಕರ್ಮಿಗಳು ಯುವತಿಯೊಬ್ಬಳ ಕುತ್ತಿಗೆ ಕೊಯ್ದು ಹತ್ಯೆ ಮಾಡಿರುವ ಘಟನೆ ವಿದ್ಯಾನಗರದ 10ನೇ ಕ್ರಾಸ್​ನಲ್ಲಿ ನಡೆದಿದೆ. ತುರುವೇಕೆರೆ ತಾಲೂಕಿನ ದಾಸಿಹಳ್ಳಿ ಗ್ರಾಮದ ಯುವತಿ ವೀಣಾ (24) ಕೊಲೆಯಾದ ಯುವತಿ.

ಕಳೆದ ಎರಡು ವರ್ಷದಿಂದ ತುಮಕೂರಿನ ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ವೀಣಾ, ತನ್ನ ಇಬ್ಬರು ಸ್ನೇಹಿತೆಯರೊಂದಿಗೆ ವಿದ್ಯಾನಗರದ 10ನೇ ಕ್ರಾಸ್ ಬಳಿ ವಾಸವಿದ್ದರು. ನಿನ್ನೆ ಎಂದಿನಂತೆ ಬೆಳಗ್ಗೆ ಕೆಲಸಕ್ಕೆ ಹೋಗಿದ್ದ ವೀಣಾ‌, ಮಧ್ಯಾಹ್ನ ಕೆಲಸ ಮುಗಿಸಿ ಮನೆಗೆ ಹಿಂತಿರುಗಿದ್ದಾರೆ.

ರಾತ್ರಿ ಮನೆಯಲ್ಲಿದ್ದಾಗ ಬಂದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ವೀಣಾಳ ಕುತ್ತಿಗೆ ಕೊಯ್ದು ಭೀಕರವಾಗಿ ಕೊಲೆ ಮಾಡಿದ್ದಾರೆ. ಸ್ನೇಹಿತೆಯರು ರಾತ್ರಿ 11 ಗಂಟೆಗೆ ಕೆಲಸ ಮುಗಿಸಿ ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಘಟನಾ ಸ್ಥಳಕ್ಕೆ ತುಮಕೂರು ಎನ್​ಇಪಿಎಸ್ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಯುವತಿ ವೀಣಾಳ ಮೃತದೇಹವನ್ನು ತುಮಕೂರು ಜಿಲ್ಲಾಸ್ಪತ್ರೆಯ ಶವಗಾರಕ್ಕೆ ರವಾನೆ ಮಾಡಲಾಗಿದೆ. ಘಟನೆ ಸಂಬಂಧ ಎನ್​ಇಪಿಎಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಆರೋಪಿಗಳ ಪತ್ತೆಯ ಬಳಿಕ, ಯುವತಿ ಕೊಲೆಯಾಗಲು ಕಾರಣವೇನು ಎಂಬ ಪ್ರಶ್ನೆಗೆ ಉತ್ತರ ಸಿಗಬೇಕಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net