ಸಿಎಂ, ಡಿಸಿಎಂ ಮೇಲಿನ ಕ್ರಿಮಿನಲ್ ಪ್ರಕರಣ ವಾಪಸ್; ಕೋವಿಡ್​ ನಿಯಮ ಉಲ್ಲಂಘಿಸಿದ್ದಕ್ಕೆ ಜಡಿದಿದ್ದ ಕೇಸ್​!

Siddaramaiah DK Shivakumar
Published on

ಬೆಂಗಳೂರು: ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಒಂಬತ್ತು ಕ್ರಿಮಿನಲ್ ಮೊಕದ್ದಮೆಗಳನ್ನು ಸರ್ಕಾರ ಹಿಂಪಡೆದಿದೆ. ಇದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಮೇಲಿದ್ದ ಪ್ರಕರಣವೂ ಸೇರಿದೆ.

ಮೇಕೆದಾಟು ಪಾದಯಾತ್ರೆ ಹಾಗೂ ಇತರೆ ಕೆಲ ಪ್ರಕರಣಗಳನ್ನು ಸೇರಿದಂತೆ ಒಟ್ಟು ಒಂಬತ್ತು ಪ್ರಕರಣಗಳನ್ನು ಅಭಿಯೋಜನೆಯಿಂದ ಹಿಂಪಡೆಯಲು ಉಚ್ಛ ನ್ಯಾಯಾಲಯದ ಅನುಮತಿ ಪಡೆಯಲು ಅಗತ್ಯ ಕ್ರಮಕೈಗೊಳ್ಳಬೇಕೆಂದು ಸಚಿವ ಸಂಪುಟ ಉಪ ಸಮಿತಿ ಶಿಫಾರಸು ಮಾಡಿತ್ತು. ಗುರುವಾರ ನಡೆದ ಸಂಪುಟ ಸಭೆಯಲ್ಲಿ ಇದನ್ನು ಅಂಗೀಕರಿಸಲಾಯಿತು.

ಕೋವಿಡ್ ಮಾರ್ಗಸೂಚಿ ಉಲ್ಲಂಸಿ ಪಾದಯಾತ್ರೆ ನಡೆಸಿದ ಕಾರಣಕ್ಕೆ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಸೇರಿ ಇತರ ನಾಯಕರ ಮೇಲೆ ತಹಸೀಲ್ದಾರರು ಪ್ರಕರಣ ದಾಖಲಿಸಿದ್ದರು.

ಈ ಒಂಬತ್ತು ಪ್ರಕರಣದಲ್ಲಿ ಯಾವುದೇ ಕೋಮು ಗಲಭೆಯ ಪ್ರಕರಣ ಇಲ್ಲ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net