ಭತ್ತದ ಗದ್ದೆಯಲ್ಲಿ ಪತ್ತೆಯಾಯ್ತು ಬೃಹತ್​ ಮೊಸಳೆ!

crocodile in farm
crocodile in farm
Published on

ವಿಜಯನಗರ: ತುಂಗಭದ್ರಾ ನದಿಯಲ್ಲಿ ಸೆರೆಹಿಡಿದ ಬೃಹದಾಕಾರದ ಮೊಸಳೆ ಪತ್ತೆಯಾಗಿದ್ದು ಎಲ್ಲರನ್ನೂ ಕ್ಷಣ ಕಾಲ ಗಾಬರಿಗೊಳಿಸಿತು.

ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ರಾಜವಾಳ ಬಳಿ ರೈತರೊಬ್ಬರ ಭತ್ತದ ಗದ್ದೆಯಲ್ಲಿ ಬೃಹತ್​ ಗಾತ್ರದ ಮೊಸಳೆ ಪ್ರತ್ಯಕ್ಷವಾಗಿದೆ. ಬರೋಬ್ಬರಿ 9 ಅಡಿ ಉದ್ದವಿರುವ ಮೊಸಳೆ ಕಂಡು ಗಾಬರಿಗೊಂಡ ರೈತರು ಅರಣ್ಯ ಇಲಾಖೆಗೆ ಕರೆ ಮಾಡಿದ್ದಾರೆ.

ಅರಣ್ಯ ಇಲಾಖೆಯ ಸಿಬ್ಬಂದಿ ಸಹಕಾರದಿಂದ ಮೊಸಳೆಯನ್ನು ಸೆರೆ ಹಿಡಿಯಲಾಗಿದ್ದು ಅದರ ರಕ್ಷಣೆ ಮಾಡಲಾಗಿದೆ.

ಗದ್ದೆಯಲ್ಲಿ ಕಂಡುಬಂದ ಮೊಸಳೆಯನ್ನು ಅರಣ್ಯ ಇಲಾಖೆಯ ಸಿಬ್ಬಂದಿ ಹಾಗೂ ಗ್ರಾಮಸ್ಥರು ಹರಸಾಹಸ ಪಟ್ಟು ಸೆರೆಹಿಡಿದಿದ್ದಾರೆ. ಸೆರೆ ಹಿಡಿದ ನಂತರ ಮೊಸಳೆಯನ್ನು ಸುರಕ್ಷಿತ ಸ್ಥಳಕ್ಕೆ ಅರಣ್ಯ ಇಲಾಖೆಯ ಸಿಬ್ಬಂದಿ ಬಿಟ್ಟಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net