

ರಾಣೆಬೆನ್ನೂರ: ತಾಲೂಕಿನ ರೈತರಿಗೆ ಖಾಸಗಿ ವಿಮಾ ಕಂಪನಿಯವರು ಕೂಡಲೇ ಬೆಳೆವಿಮೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ರಾಜ್ಯ ರೈತ ಸಂ ಹಾಗೂ ಹಸಿರು ಸೇನೆ ಕಾರ್ಯಕರ್ತರು ಮಂಗಳವಾರ ತಾಲೂಕಿನ ಕುಪ್ಪೇಲೂರ ಗ್ರಾಪಂ ಎದುರು ಪ್ರತಿಭಟನೆ ನಡೆಸಿದರು.
ನೇತೃತ್ವ ವಹಿಸಿದ್ದ ರೈತ ಸಂದ ಸಂಟನಾ ಕಾರ್ಯದಶಿರ್ ರವೀಂದ್ರಗೌಡ ಪಾಟೀಲ ಮಾತನಾಡಿ, ಕಳೆದ ಬಾರಿ ಸರ್ಕಾರ ಬರಗಾಲ ಪೀಡಿತ ಜಿಲ್ಲೆ ಎಂದು ಘೋಷಣೆ ಮಾಡಿದ ಮೇಲೆ ಬೆಳೆವಿಮೆ ಮಾಡಿಸಿದ ಎಲ್ಲ ರೈತರ ಖಾತೆಗೆ ವಿಮಾ ಕಂಪನಿಯವರು ಶೇ. 25ರಷ್ಟು ಪರಿಹಾರ ಹಾಕಿದ್ದರು. ಬಾಕಿಯಿರುವ ಶೇ. 75ರಷ್ಟು ಪರಿಹಾರ ಕೊಡುವುದಾಗಿ ತಿಳಿಸಿದ್ದರು.
ಆದರೀಗ ವರ್ಷ ಕಳೆದರೂ ವಿಮಾ ಕಂಪನಿಯವರು ಹಣ ನೀಡದೆ ಮೋಸ ಮಾಡುತ್ತಿದ್ದಾರೆ. ಬೆಳೆವಿಮೆಯ ಬಾಕಿ ಹಣ ನೀಡುವಂತೆ ಕೇಳಿದರೆ, ಇಲ್ಲಸಲ್ಲದ ನೆಪಹೇಳಿ ರೈತರನ್ನು ವಾಪಸ್ ಕಳುಹಿಸುತ್ತಿದ್ದಾರೆ. ಆದ್ದರಿಂದ ಸರ್ಕಾರ ಕೂಡಲೇ ವಿಮಾ ಕಂಪನಿಯವರಿಗೆ ಸೂಚಿಸಿ ರೈತರಿಗೆ ಪರಿಹಾರ ಒದಗಿಸಬೇಕು. ಇಲ್ಲವಾದರೆ ಮುಂದಿನ ದಿನದಲ್ಲಿ ತೀವ್ರತರನಾದ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.
ಉಪ ತಹಸೀಲ್ದಾರ್ ಎಂ.ಎಚ್. ಕಡೂರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಗ್ರಾಪಂ ಅಧ್ಯೆ ರೇಖಾ ಮಾದೇನಹಳ್ಳಿ, ರಾಮಪ್ಪ ಶಿರಗೇರಿ, ಹನುಮಂತಪ್ಪ ಸಂಕಣ್ಣನವರ, ಶಾಮರಡ್ಡಿ ನ್ಯಾಮತಿ, ರಾಮಪ್ಪ ಆಡಿನವರ, ಯಲ್ಲಪ್ಪ ಭಾನುವಳ್ಳಿ, ಮಂಜುನಾಥ ಅಳಲಗೇರಿ, ವಿನಾಯಕ ಅಳಲಗೇರಿ, ಕೇಶವರಡ್ಡಿ ಹರಿಹರ, ಸುಭಾಷಪ್ಪ ನ್ಯಾಮತಿ, ಕೆಂಚನಗೌಡ ಪಾಟೀಲ ಮತ್ತಿತರರು ಪಾಲ್ಗೊಂಡಿದ್ದರು.