ವಾಡಿಕೆಗಿಂತ ಅಧಿಕ ಮಳೆ; 81589 ಹೆಕ್ಟೇರ್ ಪ್ರದೇಶದಲ್ಲಿ ಬೆಳೆಹಾನಿ

VidhanaSoudha
Published on

ಬೆಂಗಳೂರು: ರಾಜ್ಯದಲ್ಲಿ ಜೂನ್ 1 ರಿಂದ ಆಗಸ್ಟ್ 15 ರವರೆಗೆ ವಾಡಿಕೆಗಿಂತ ಶೇ. 22 ರಷ್ಟು ಹೆಚ್ಚು ಮಳೆಯಾಗಿದ್ದು, ಚಾಮರಾಜನಗರ, ಮಂಡ್ಯ ತುಮಕೂರಿನಲ್ಲಿ ಅತ್ಯಧಿಕ ಮಳೆಯಾಗಿದೆ. 13 ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಈ ಬಾರಿ ಇಡೀ ರಾಜ್ಯದಲ್ಲಿ ಉತ್ತಮ ಮಳೆಯಾಗಿದೆ.
ಮುಂದಿನ ನಾಲ್ಕು ವಾರಗಳಲ್ಲಿ ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿ, ಮಲೆನಾಡಿನಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಅತಿವೃಷ್ಟಿ ಮತ್ತು ಪ್ರವಾಹ ಪರಿಸ್ಥಿತಿ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
ರಾಜ್ಯಾದ್ಯಂತ 82 ಲಕ್ಷ ಹೆಕ್ಟೇರ್ ಗುರಿಗೆ ಎದುರಾಗಿ 70 ಲಕ್ಷ ಹೆಕ್ಟೇರ್ ಬಿತ್ತನೆ ಆಗಿದೆ. ಈ ಬಾರಿ ಗುರಿ ಮೀರಿ ಸಾಧನೆ ಆಗುವ ನಿರೀಕ್ಷೆ ಇದೆ. ಮುಂಗಾರು ಪೂರ್ವ ಬಿತ್ತನೆ ಆಗಿರುವ ಉದ್ದು ಮತ್ತು ಹೆಸರು ಕಟಾವಿಗೆ ಬಂದಿದೆ. ಮಳೆಯಿಂದ 81589 ಹೆಕ್ಟೇರ್ ಪ್ರದೇಶದಲ್ಲಿ ಬೆಳೆಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ. ಅಂತಿಮ ವರದಿ ಬಂದ ಕೂಡಲೇ ಪರಿಹಾರ ವಿತರಣೆಗೆ ಕ್ರಮ ವಹಿಸಲಾಗುವುದು ಎಂದು ಸಭೆಲ್ಲಿ ತಿಳಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net