ತಬ್ಲಿಘಿ ಜಮಾತ್​ ಸದಸ್ಯರ ಬ್ಯಾಂಕ್ ಖಾತೆಗಳಿಗೆ ಕೊಲ್ಲಿ ರಾಷ್ಟ್ರಗಳಿ ಹಣ ಸಂದಾಯ

Thablighi jamat 2 APR 20
Published on

ನವದೆಹಲಿ: ಕೊಲ್ಲಿ ರಾಷ್ಟ್ರಗಳಿಂದ ತಬ್ಲಿಘಿ ಜಮಾತ್​ ಸದಸ್ಯರ ಬ್ಯಾಂಕ್ ಖಾತೆಗಳಿಗೆ ಕೋಟ್ಯಂತರ ರೂಪಾಯಿ ಹಣ ಸಂದಾಯವಾಗಿದೆ ಎಂದು ದೆಹಲಿ ಪೊಲೀಸರು ಜಾರಿ ನಿರ್ದೇಶನಾಲಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ತಬ್ಲೀಘಿ ಜಮಾತ್​ ಮಾರ್ಕಾಜ್ ನಿಧಿ ಬಗ್ಗೆ ತನಿಖೆ ಮಾಡುತ್ತಿರುವ ದೆಹಲಿ ಪೊಲೀಸರ ಅಪರಾಧ ವಿಭಾಗ ಇದನ್ನು ಪತ್ತೆ ಮಾಡಿದೆ.

ಕೊಲ್ಲಿ ರಾಷ್ಟ್ರಗಳು ಮತ್ತು ಖಾತೆದಾರರ ನಡುವೆ ಹಣ ಸಂದಾಯ ನಡೆದಿದೆ. ವಹಿವಾಟಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಕ್ರೈಂ ಬ್ರಾಂಚ್ ಶುಕ್ರವಾರ ಜಾರಿ ನಿರ್ದೇಶನಾಲಯಕ್ಕೆ ಸಲ್ಲಿಸಿದೆ. ಈ ವಹಿವಾಟಿನಲ್ಲಿ ಭಾಗಿಯಾಗಿರುವವರು ನಿಜಾಮುದ್ದೀನ್ ಮಾರ್ಕಾಜ್ ಮತ್ತು ತಬ್ಲಿಘಿ ಜಮಾತ್ ಮುಖ್ಯಸ್ಥ ಮೌಲಾನಾ ಸಾದ್ ಅವರೊಂದಿಗೆ ನಿಕಟ ಸಂಬಂಧ ಹೊಂದಿದ್ದಾರೆ ಎಂದು ತಿಳಿದು ಬಂದಿದೆ.

ಮೌಲಾನಾ ಸಾದ್ ಅವರು 2 ಕೋಟಿ ರೂ.ಗಳ ಮೌಲ್ಯದ ಆಸ್ತಿ ಹಾಗೂ ಹಣವನ್ನು ಸಂಗ್ರಹಿಸಿದ್ದಾರೆ ಎಂಬ ಮಾಹಿತಿ ಕೂಡ ಲಭ್ಯವಾಗಿದೆ.

ಸಾಮಾಜಿಕ, ರಾಜಕೀಯ ಹಾಗೂ ಧಾರ್ಮಿಕ ಸಭೆ ನಡೆಸಲು ಸಂಬಂಧಿಸಿದ ಕೇಂದ್ರದ ನಿರ್ವಹಣೆಗೆ ಸಂಬಂಧಿಸಿದಂತೆ ಸರ್ಕಾರದ ಆದೇಶಗಳನ್ನುತಬ್ಲಿಘಿ ಜಮಾತ್‌ನ ನಿಜಾಮುದ್ದೀನ್ ಪ್ರಧಾನ ಕಚೇರಿ ಉಲ್ಲಂಘಿಸಿದೆ ಎಂಬ ಆರೋಪದ ಮೇಲೆ ಸಾಂಕ್ರಾಮಿಕ ರೋಗಗಳ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆ ವಿಭಾಗಗಳ ಅಡಿಯಲ್ಲಿ ಕ್ರಿಮಿನಲ್​​ ಪ್ರಕರಣ ದಾಖಲಿಸಲಾಗಿದೆ. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net