ಸಿದ್ದರಾಮೋತ್ಸವಕ್ಕೆ ತೆರಳುತ್ತಿದ್ದ ಕ್ರೂಸರ್ ಪಲ್ಟಿ: ಓರ್ವ ಅಭಿಮಾನಿ ಸ್ಥಳದಲ್ಲಿ ಸಾವು-ಇಬ್ಬರ ಸ್ಥಿತಿ ಚಿಂತಾಜನಕ

accident
ಬಾದಾಮಿ ತಾಲೂಕಿನ ಹೂಲಗೇರಿ ಗ್ರಾಮ ಸಮೀಪದ ಅಪಘಾತವಾದ ಕ್ರೂಸರ್.
Published on

ಬಾಗಲಕೋಟೆ : ಸಿದ್ದರಾಮೋತ್ಸವ ಹಿನ್ನೆಲೆಯಲ್ಲಿ ದಾವಣಗೆರೆಗೆ ಮಂಗಳವಾರ ರಾತ್ರಿ ತೆರಳುತ್ತಿದ್ದ ಕ್ರೂಸರ್ ವಾಹನ ಬಾದಾಮಿ ತಾಲೂಕಿನ ಹೂಲಗೇರಿ ಗ್ರಾಮದ ಸಮೀಪ ಪಲ್ಟಿ ಹೊಡೆದು ಸ್ಥಳದಲ್ಲಿ ಓರ್ವ ಮೃತಪಟ್ಟಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ.

ಬೀಳಗಿ ತಾಲೂಕಿನ ಚಿಕ್ಕ ಆಲಗುಂಡಿ ಗ್ರಾಮದ ಕ್ರೂಸರ್ ಚಾಲಕ ಪ್ರಕಾಶ ಕಂಬಾರ (35) ಮೃತಪಟ್ಟಿದ್ದಾರೆ.

ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಬಾಗಲಕೋಟೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಕೆರೂರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net