ನೀರಿನ ಬಾಟಲ್​ ಬಳಕೆ ಬಗ್ಗೆ ಸಿಎಸ್​ ಖಡಕ್ ಸೂಚನೆ!

VidhanaSoudha
Published on

ಬೆಂಗಳೂರು: ಇನ್ನು ಮುಂದೆ ಎಲ್ಲಾ ಸಭೆ ಸಮಾರಂಭಗಳಲ್ಲಿ ಏಕ ಕಾಲಿಕ ಬಳಕೆಯ ಪ್ಲಾಸ್ಟಿಕ್ ಬಾಟಲ್‌ನಲ್ಲಿ ನೀರಿನ ಬಳಕೆ, ಸರಬರಾಜು ಮಾಡುವುದನ್ನು ನಿಲ್ಲಿಸಬೇಕು ಎಂದು ಸರ್ಕಾರದ ಮುಖ್ಯಕಾರ್ಯದರ್ಶಿಯವರು ಎಲ್ಲಾ ಇಲಾಖೆಗಳಿಗೆ, ಜಿಲ್ಲಾಡಳಿತಗಳಿಗೆ ಸುತ್ತೋಲೆ ಹೊರಡಿಸಿದ್ದಾರೆ.

ಸರ್ಕಾರದಿಂದ ಆಯೋಜಿಸಲ್ಪಡುವ ಅಧಿಕೃತ ಸಭೆ ಸಮಾರಂಭಗಳಲ್ಲಿ, ಸರ್ಕಾರಿ ಕಚೇರಿಗಳಲ್ಲಿ ಏಕ ಕಾಲಿಕ ಬಳಕೆ ಪ್ಲಾಸ್ಟಿಕ್ ನೀರಿನ ಬಾಟಲ್‌ಗಳ ಬಳಕೆ ನಿಷೇಧಿಸಿ 2018ರ ಸೆಪ್ಟೆಂಬರ್‌ನಲ್ಲಿ ಆದೇಶ ಹೊರಡಿಸಲಾಗಿತ್ತು. ಆದರೆ, ಇತ್ತೀಚಿನ ದಿನಗಳಲ್ಲಿ ಸರ್ಕಾರದಿಂದ ಅಥವಾ ಸರ್ಕಾರಿ ಸ್ವಾಮ್ಯದ ಮಂಡಳಿ, ನಿಗಮ, ವಿಶ್ವವಿದ್ಯಾಲಯ, ಸರ್ಕಾರದಿಂದ ಅನುದಾನ ಪಡೆಯುವ ಯಾವುದೇ ಸಂಸ್ಥೆಗಳಿಂದ ಆಯೋಜಿಸುವ ಸಭೆ ಸಮಾರಂಭಗಳಲ್ಲಿ ಈ ಆದೇಶ ಪಾಲನೆಯಾಗುತ್ತಿಲ್ಲ. ಸಭೆ- ಸಮಾರಂಭಗಳಲ್ಲಿ ಕುಡಿಯುವ ನೀರನ್ನು ಪ್ಲಾಸ್ಟಿಕ್ ಬಾಟಲಿಗಳಲ್ಲಿ ವಿತರಿಸುವುದು ಸಮರ್ಥನೀಯವಲ್ಲ ಎಂದು ಎಂದು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net