ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಪದ ಬಳಕೆ ಆರೋಪ; FIR ದಾಖಲಾದ ಬೆನ್ನಲ್ಲೇ CT Ravi ಬಂಧನ

CT Ravi
Published on

ಬೆಳಗಾವಿ: ಪ್ರತಿಭಟನೆ ವೇಳೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್​ ವಿರುದ್ಧ ಅವಾಚ್ಯ ಶಬ್ದ ಬಳಸಿದ ಆರೋಪದ ಮೇಲೆ ಬಿಜೆಪಿ ವಿಧಾನಪರಿಷತ್​ ಸದಸ್ಯ ಸಿಟಿ ರವಿಯನ್ನು (CT Ravi) ಬೆಳಗಾವಿಯ ಹಿರೇಬಾಗೇವಾಡಿ ಪೊಲೀಸರು ಬಂಧಿಸಿದ್ದಾರೆ.

ಹಿರೇಬಾಗೇವಾಡಿ ಪೊಲೀಸ್​ ಠಾಣೆಯಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್​ ದೂರು ದಾಖಲಿಸಿದ ಕೆಲವೇ ಕ್ಷಣಗಳ ಒಳಗಾಗಿ ಸಿಟಿ ರವಿ ಅವರನ್ನು ಬಂಧಿಸಿರುವುದು ರಾಜಕೀಯ ಅಲ್ಲೋಲ ಕಲ್ಲೋಲಕ್ಕೆ ಕಾರಣವಾಗಿದ್ದು, ಸುವರ್ಣಸೌಧದ ಹಾಗೂ ಹಿರೇಬಾಗೇವಾಡಿ ಠಾಣೆಯ ಸುತ್ತ ಪೊಲೀಸರು ಭದ್ರತೆಯನ್ನು ಹೆಚ್ಚಿಸಿದ್ದಾರೆ.

ಸಂವಿಧಾನ ಶಿಲ್ಪಿ ಡಾ.ಬಿ. ಆರ್. ಅಂಬೇಡ್ಕರ್ ಅವರ ಕುರಿತು ಕೇಂದ್ರ ಗೃಹ ಸಚಿವ ಅಮಿತ್​ ಷಾ ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಬಿಜೆಪಿ-ಕಾಂಗ್ರೆಸ್​ ನಡುವೆ ವಾಕ್ಸಮರ ಜೋರಾಗಿದ್ದು, ಬೆಳಗಾವಿಯ ಸುವರ್ಣಸೌಧದಲ್ಲಿ ಮುಖ್ಯಮಂತ್ರಿ ಸೇರಿದಂತೆ ಸಚಿವರು ಹಾಗೂ ಶಾಸಕರು ಪ್ರತಿಭಟನೆ ನಡೆಸಿದ್ದಾರೆ. ಇನ್ನೂ ಪ್ರತಿಭಟನೆಯ ವೇಳೆ ಬಿಜೆಪಿಯ ವಿಧಾನಪರಿಷತ್​ ಸದಸ್ಯ ಸಿಟಿ ರವಿ (CT Ravi) ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್​​ (Laxmi Hebbalkar) ಅವರಿಗೆ ಅವಾಚ್ಯ ಶಬ್ದ ಬಳಸಿ ನಿಂದಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು, ಈ ವಿಚಾರ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಹಲ್ಲೆ ಯತ್ನ ಕೂಡ ನಡೆದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net