ಕಲೆ, ಸಂಸ್ಕೃತಿ ಬೆಳೆಸುವುದು ವಿದ್ಯಾರ್ಥಿಗಳ ಜವಾಬ್ದಾರಿ

29ckm4- tms
ಚಿಕ್ಕಮಗಳೂರಲ್ಲಿ ಹಮ್ಮಿಕೊಂಡಿದ್ದ ಸಾಂಪ್ರದಾಯಿಕ ದಿನವನ್ನು ಎಸ್.ಎಸ್.ವೆಂಕಟೇಶ್ ಉದ್ಘಾಟಿಸಿದರು. ಗೀತಾ ಮೂರ್ತಿ, ಯಮುನಾ ಚನ್ನಬಸಪ್ಪ ಶೆಟ್ಟಿ, ಎಂ.ಬಿ.ಕಟಗಿ, ಇಂದ್ರೇಶ್ ಇದ್ದರು.
Published on

ಚಿಕ್ಕಮಗಳೂರು: ಭಾರತೀಯ ಕಲೆ, ಸಂಸ್ಕೃತಿ ರಕ್ಷಿಸಿ ಬೆಳೆಸುವ ಜವಾಬ್ದಾರಿ ವಿದ್ಯಾರ್ಥಿಗಳ ಮೇಲಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಪ್ರಧಾನ ಕಾರ್ಯದರ್ಶಿ ಎಸ್.ಎಸ್.ವೆಂಕಟೇಶ್ ಹೇಳಿದರು.
ನಗರದ ಟಿಎಂಎಸ್‌ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸಾಂಪ್ರದಾಯಿಕ ದಿನ ಉದ್ಘಾಟಿಸಿ ಮಾತನಾಡಿ, ಬದಲಾದ ಕಾಲಘಟ್ಟದಲ್ಲಿ ಭಾರತೀಯ ಕಲೆ, ಸಂಸ್ಕೃತಿ ಅಳಿವಿನ ಅಂಚಿಗೆ ತಲುಪುತ್ತಿದೆ. ಇದರ ಬಗ್ಗೆ ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದಾಗ ಅದನ್ನು ಉಳಿಸಿ ಬೆಳಸಿಕೊಂಡು ಹೋಗಲು ಸಾಧ್ಯ ಎಂದರು.
ಕಲೆ, ಸಂಸ್ಕೃತಿಯ ಅಧ್ಯಯನದ ಮೂಲಕ ಉತ್ತಮ ಸಂಸ್ಕಾರ ಲಭ್ಯವಾಗುತ್ತದೆ. ಹಿರಿಯರು ಮೌಲ್ಯಯುತ ಸಂಸ್ಕೃತಿ ಬಿಟ್ಟು ಹೋಗಿದ್ದಾರೆ. ಭಾರತೀಯ ಕಲೆ, ಸಂಸ್ಕೃತಿಯು ವಿಶ್ವದಲ್ಲಿಯೇ ಅಗ್ರ ಸ್ಥಾನದಲ್ಲಿದ್ದು, ಅದನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ಹೇಳಿದರು.
ಸಂಸ್ಥೆ ಅಧ್ಯಕ್ಷೆ ಗೀತಾ ಮೂರ್ತಿ ಮಾತನಾಡಿ, ವಿದ್ಯಾರ್ಥಿಗಳು ತಮ್ಮಲ್ಲಿ ಅಡಗಿರುವ ಸುಪ್ತ ಪ್ರತಿಭೆಯನ್ನು ಇಂತಹ ವೇದಿಕೆ ಮೂಲಕ ಪ್ರದರ್ಶಿಸಬೇಕು. ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ ಜ್ಞಾನ ವೃದ್ಧಿಸಿಕೊಳ್ಳಬಹುದು ಎಂದು ತಿಳಿಸಿದರು.
ಖಜಾಂಚಿ ಯಮುನಾ ಚನ್ನಬಸಪ್ಪಶೆಟ್ಟಿ ಮಾತನಾಡಿ, ಪಾಶ್ಚಾತ್ಯರು ನಮ್ಮ ಸಂಸ್ಕೃತಿಯನ್ನು ಅನುಕರಿಸುತ್ತಿರುವ ಕಾಲದಲ್ಲಿ ಇದರ ಬಗ್ಗೆ ಕಡೆಗಣನೆ ಮಾಡಬಾರದು. ಉತ್ತಮ ಸಂಸ್ಕಾರ ರೂಢಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಪ್ರಾಚಾರ್ಯ ಎಂ.ಬಿ.ಕಟಗಿ, ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಇಂದ್ರೇಶ್, ಮುಖ್ಯಶಿಕ್ಷಕ ನಟರಾಜ್ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net