

ಮುಂಬೈ: ಮರಾಠ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ಮಾಡುವಂತೆ ಆಗ್ರಹಿಸಿ ಮಹಾರಾಷ್ಟ್ರದಲ್ಲಿ ಪ್ರತಿಭಟನೆಗಳು ತೀವ್ರ ಸ್ವರೂಪ ಪಡೆದಿದ್ದು, ಬೀಡ್ನಲ್ಲಿರುವ ಎನ್ಸಿಪಿ ಕಚೇರಿಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದ್ದಾರೆ. ಇದಲ್ಲದೆ ಶರದ್ ಪವಾರ್ ಬಣದ ಶಾಸಕನ ಮನೆಗೂ ಬೆಂಕಿ ಹಚ್ಚಲಾಗಿದೆ.
ಶರದ್ ಪವಾರ್ ಬಣದ ಶಾಸಕ ಸಂದೀಪ್ ಕ್ಷೀರಸಾಗರ್ ಮತ್ತು ಹಿರಿಯ ಒಬಿಸಿ ನಾಯಕ ಜಯದತ್ ಕ್ಷೀರಸಾಗರ್ ಅವರ ಮನೆಗಳಿಗೆ ಬೆಂಕಿ ಹಚ್ಚಲಾಗಿದೆ. ಇದಲ್ಲದೆ ಪ್ರತಿಭಟನಾ ನಿರತರು ಕ್ಷೀರಸಾಗರ ಕುಟುಂಬಕ್ಕೆ ಸಂಬಂಧಿಸಿದ ಸಂಸ್ಥೆಯಾದ ಕೆಎಸ್ಕೆ ಕಾಲೇಜಿನ ಕಚೇರಿಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದ್ದಾರೆ.
ಇದಲ್ಲದೆ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಬಣದ ಸಚಿವ ಛಗನ್ ಭುಜ್ಬಲ್ ಆಪ್ತ ಸುಭಾಷ್ ರಾವುತ್ಗೆ ಮಾಲೀಕತ್ವದ ಹೋಟೆಲ್ ಸನ್ರೈಸ್ಗೆ ಪ್ರತಿಭಟನಾ ನಿರತರು ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದ್ದು, ಹೋಟೆಲ್ ಮುಂಭಾಗ ನಿಂತಿದ್ದ ಕಾರು ಹಾಗೂ ಬೈಕ್ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದ್ದಾರೆ.
ಮರಾಠ ಮೀಸಲಾತಿ ಕಿಚ್ಚು ರಾಜ್ಯಾದ್ಯಂತ ವ್ಯಾಪಿಸಿದ್ದು, ಆಡಳಿತರೂಢ ಬಿಜೆಪಿ-ಶಿವಸೇನೆ-ಎನ್ಸಿಪಿ ಸರ್ಕಾರದ ಶಾಸಕರು ಹಾಗೂ ಸಚಿವರ ಮನೆಗಳನ್ನು ಗುರಿಯಾಗಿಸಿ ದಾಳಿ ಮಾಡಲಾಗುತ್ತಿದೆ. ಘರ್ಷಣೆ ಬೆನ್ನಲ್ಲೇ ಮಹಾರಾಷ್ಟ್ರದ ಬೀಡ್ ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.