

ಬೆಂಗಳೂರು: ರಾಜ್ಯದಲ್ಲಿ ಶನಿವಾರ ರಾತ್ರಿ 7 ಗಂಟೆಯಿಂದ ಕರೊನಾ ಕರ್ಫ್ಯೂ ಜಾರಿಯಲ್ಲಿದ್ದು, ಸೋಮವಾರ ಬೆಳಗ್ಗೆ 7 ಗಂಟೆವರೆಗೆ ಮುಂದುವರಿಯಲಿದೆ. ತುರ್ತು ಮತ್ತು ಅಗತ್ಯ ಸೇವೆಗಳನ್ನು ಹೊರತುಪಡಿಸಿ ಉಳಿದ ವಹಿವಾಟು ಸಂಪೂರ್ಣವಾಗಿ ಬಂದ್ ಇರಲಿದೆ. ರಾಜ್ಯ ಸರ್ಕಾರ ಮೇ 31ರವರೆಗೆ ಕರೊನಾ ಲಾಕ್ಡೌನ್ ಮುಂದುವರಿಸಿ ಬಹುತೇಕ ಸೇವೆಗಳಿಗೆ ನಿಯಮ ಸಡಿಲಿಕೆ ಮಾಡಿದೆ. ಆದರೆ, ಪ್ರತಿದಿನ ರಾತ್ರಿ 7 ರಿಂದ ಬೆಳಗ್ಗೆ 7 ವರೆಗೆ ಹಾಗೂ ಭಾನುವಾರ ಸಂಪೂರ್ಣ ಕರ್ಫ್ಯೂ ಜಾರಿಯಲ್ಲಿ ಇರಲಿದೆ ಎಂದು ಆದೇಶಿಸಿತ್ತು.
ರಸ್ತೆಗಳಲ್ಲಿ ಬ್ಯಾರಿಕೇಡ್: ರಾಷ್ಟ್ರೀಯ, ರಾಜ್ಯ ಹೆದ್ದಾರಿ ಮತ್ತು ಪ್ರಮುಖ ರಸ್ತೆಗಳನ್ನು ಹೊರತುಪಡಿಸಿ ಉಳಿದ ಎಲ್ಲ ರಸ್ತೆಗಳಲ್ಲಿ ಬ್ಯಾರಿಕೇಡ್ ಅಳವಡಿಸಿ ಪೊಲೀಸರು ಬಂದ್ ಮಾಡಿದ್ದಾರೆ. ಜಿಲ್ಲಾ ಗಡಿ ಮತ್ತು ಪ್ರಮುಖ ಜಂಕ್ಷನ್ಗಳಲ್ಲಿ ಪೊಲೀಸ್ ಕಾವಲು ಇರಲಿದೆ. ಪೂರ್ವನಿಗದಿತ ಮದುವೆ ಸಮಾರಂಭಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ಧರ್ಮ, ರಾಜಕೀಯ ಸಭೆ ಸಮಾರಂಭಗಳನ್ನು ನಿರ್ಬಂಧಿಸಲಾಗಿದೆ. ಪಾರ್ಕ್ ಮತ್ತು ರಸ್ತೆಗಳಲ್ಲಿ ವಾಯು ವಿಹಾರ, ಶಾಪಿಂಗ್, ಸಂಬಂಧಿಕರ ಮನೆಗೆ ಸುತ್ತಾಡುವುದು ಎಲ್ಲವನ್ನು ಸರ್ಕಾರ ನಿರ್ಬಂಧಿಸಿದೆ.
ಸುತ್ತಾಡಿದರೆ ವಾಹನ ಸೀಜ್: ಲಾಕ್ಡೌನ್ ಸಡಿಲಿಕೆ ಆದ ಬಳಿಕ ಮೊದಲ ಭಾನುವಾರವೆಂದು ಸುತ್ತಾಡಲು ಹೊರಬಂದರೆ ವಾಹನ ಜಪ್ತಿ ಮಾಡಿ, ಕೇಸ್ ದಾಖಲಿಸುತ್ತಾರೆ. ಸಂಚಾರಕ್ಕೆ ಯಾವುದೇ ಪಾಸ್ ಅನ್ವಯ ಆಗುವುದಿಲ್ಲ. ಕೇವಲ ತುರ್ತು ಮತ್ತು ಅಗತ್ಯ ಸೇವೆಗಳಿಗೆ ಅವಕಾಶ.
ಏನಿರಲ್ಲ?
ಏನಿರುತ್ತೆ?