ಕಸ್ಟಮ್ಸ್​ ಅಧಿಕಾರಿಗಳಿಗೆ ಹೆದರಿ ಚಿನ್ನ ಅಡಗಿಸಿಟ್ಟು ಖದೀಮರು ಪರಾರಿ

zsjhdh
Published on

ಬೆಂಗಳೂರು: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್​ ಅಧಿಕಾರಿಗಳ ಕಾರ್ಯಾಚರಣೆ ಮುಂದುವರಿದಿದೆ. ಇದೀಗ ಅಕ್ರಮವಾಗಿ ವಿದೇಶದಿಂದ ಚಿನ್ನ ಸಾಗಾಟ ಮಾಡುತ್ತಿರುವುದನ್ನು ಪತ್ತೆ ಹಚ್ಚಿದ್ದಾರೆ.

ವಿದೇಶದಿಂದ ಚಿನ್ನವನ್ನು ಮುಂಬೈಗೆ ತಂದು, ಅಲ್ಲಿಂದ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಆರೋಪಿಗಳು ಬಂದಿಳಿದಿದ್ದಾರೆ. ಈ ವೇಳೆ ಕಸ್ಟಮ್ಸ್​ ಅಧಿಕಾರಿಗಳು ತಪಾಸಣೆ ನಡೆಸುತ್ತಿದ್ದರು. ಇದರಿಂದ ಭಯಗೊಂಡ ಖದೀಮರು, ತಂದಿದ್ದ ಚಿನ್ನವನ್ನು ವಿಮಾನದ ಸೀಟ್​ನ ಅಡಿಯಲ್ಲಿಟ್ಟು ಪರಾರಿಯಾಗಿದ್ದಾರೆ. ವಿಮಾನದ ಸೀಟ್​ನ ಅಡಿಯಲ್ಲಿ ಅಡಗಿಸಿಟ್ಟಿದ್ದ ಚಿನ್ನವನ್ನು ಪತ್ತೆ ಹಚ್ಚಿ ವಶಕ್ಕೆ ಪಡೆದುಕೊಳ್ಳುವಲ್ಲಿ ಕಸ್ಟಮ್ಸ್ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.

ಕಸ್ಟಮ್ಸ್ ಅಧಿಕಾರಿಗಳು ವಿಮಾನದ ಸೀಟ್​​ನ ಕೆಳಗಡೆ ಇದ್ದ 409 ಗ್ರಾಂ ಚಿನ್ನದ ಪೀಸ್​​ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಬಲೆ ಬಿಸಿದ್ದಾರೆ. ಈ ಬಗ್ಗೆ ಕಸ್ಟಮ್ಸ್​ ಅಧಿಕಾರಿಗಳು ತನಿಖೆ ಮುಂದುವರಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net