

ಬೆಂಗಳೂರು: ಕಸ್ಟಮ್ಸ್ ಅಧಿಕಾರಿಗಳ ಕಾರ್ಯಚಾರಣೆ ಮುಂದುವರಿದಿದೆ. ಹೊಚ್ಚ ಹೊಸ ಐಫೋನ್ 14 ಮೊಬೈಲ್ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಕಸ್ಟಮ್ಸ್ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.
ಆರೋಪಿ ಹೊಸ ಸರಣಿಯ ಐಫೋನ್ 14 ಮೊಬೈಲ್ನ್ನು ಬ್ಯಾಂಕಾಕ್ನಿಂದ ಬೆಂಗಳೂರಿಗೆ ತಂದಿದ್ದಾನೆ. ಈ ವೇಳೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಪರಿಶೀಲನೆ ನಡೆಸಿದ ಕಸ್ಟಮ್ಸ್ ಅಧಿಕಾರಿಗಳಿಗೆ ಐಫೋನ್ 14 ಮೊಬೈಲ್ನ್ನು ಕಳ್ಳಸಾಗಣೆ ಮಾಡುತ್ತಿರುವುದು ಪತ್ತೆಯಾಗಿದೆ.
ಬಂಧಿತ ಆರೋಪಿ ಬ್ಯಾಂಕಾಕ್ನಿಂದ ತಂದಿರುವ ಐಫೋನ್ 14 ಮೊಬೈಲ್ನ ಭಾರತದ ಬೆಲೆ 1 ಲಕ್ಷದ 90 ಸಾವಿರ ರೂ. ಈ ಮೊಬೈಲ್ ವಿದೇಶದಲ್ಲಿ 96 ಸಾವಿರ ರೂಪಾಯಿಗೆ ಲಭ್ಯವಿದೆ. ಹೀಗಾಗಿ ಕಡಿಮೆ ಬೆಲೆಗೆ ವಿದೇಶದಿಂದ ಕಳ್ಳಸಾಗಣೆ ಮೂಲಕ ತಂದು, ಭಾರತದಲ್ಲಿ ಹೆಚ್ಚಿನ ಬೆಲೆ ಮಾರಾಟ ಮಾಡುವ ಸಿದ್ಧತೆಯಲ್ಲಿದ್ದ.
ಇದೀಗ ಕಸ್ಟಮ್ಸ್ ಅಧಿಕಾರಿಗಳು ಆರೋಪಿಯನ್ನು ಬಂಧಿಸಿದ್ದು, ಹೆಚ್ಚಿನ ಮಾಹಿತಿಗೆ ತನಿಖೆಗೆ ಒಳಪಡಿಸಿದ್ದಾರೆ. ಕಳ್ಳ ಸಾಗಣೆ ಮೂಲಕ ಭಾರತದ ವಿಮಾನ ನಿಲ್ದಾಣ ಪ್ರವೇಶಿಸಿದ್ದ ಐಫೋನ್ 14 ಮೊಬೈಲ್ನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.