

ಬೆಂಗಳೂರು: ಕಳ್ಳಸಾಗಾಣಿಕೆದಾರರ ವಿರುದ್ಧ ಕಸ್ಟಮ್ಸ್ ಅಧಿಕಾರಿಗಳ ಕಾರ್ಯಾಚರಣೆ ಮುಂದುವರಿದಿದೆ. ಅಕ್ರಮವಾಗಿ ವಿದೇಶದಿಂದ ಚಿನ್ನ, ನಿಷೇಧಿತ ಪಾದಾರ್ಥಗಳನ್ನು ಕಳ್ಳಸಾಗಾಣಿಕೆ ಮೂಲಕ ತರುತ್ತಿರುವ ಸ್ಮಗ್ಲರ್ಗಳ ಬಂಧನಕ್ಕೆ ಬಲೆ ಬೀಸಿರುವ ಕಸ್ಟಮ್ಸ್ ಅಧಿಕಾರಿಗಳು ಇಂದು ಎಂಡಿಎಂಎ ಮಾತ್ರೆಗಳನ್ನು ಆಮದು ಮಾಡಿಕೊಂಡಿದ್ದ ಮಹಿಳೆಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ನಗರದ ನಗರದ ಇಂಟರ್ನ್ಯಾಷನಲ್ ಶಾಲೆಯೊಂದರ ಈಜು ತರಬೇತುದಾರಳಾಗಿರುವ ಆರೋಪಿ ಮಹಿಳೆ, ಬೆಲ್ಜಿಯಂನಿಂದ ಬೆಂಗಳೂರಿಗೆ ಎಂಡಿಎಂಎ ಮಾತ್ರೆಗಳನ್ನು ಆಮದು ಮಾಡಿಕೊಂಡಿದ್ದಳು. ಏರ್ ಕಾರ್ಗೋ ವಿಮಾನದ ತಪಾಸಣೆ ವೇಳೆ 5080 ಎಂಡಿಎಂಎ ಮಾತ್ರೆಗಳು ಪತ್ತೆಯಾಗಿದ್ದವು.
ಮಹಿಳೆ ತಪಾಸಣೆ ವೇಳೆ ಪರಾರಿಯಾಗಲು ಯತ್ನಿಸಿದ್ದಾಳೆ. ಈ ವೇಳೆ ಭದ್ರತಾ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ. ನಂತರ ಕಸ್ಟಮ್ಸ್ ಅಧಿಕಾರಿಗಳು ಮಹಿಳೆಯನ್ನು ಬಂಧಿಸಿದ್ದಾರೆ. ಆರೋಪಿ ಮಹಿಳೆಯಿಂದ 76.2 ಲಕ್ಷ ರೂ. ಮೌಲ್ಯದ ಎಂಡಿಎಂಎ ಮಾತ್ರೆಗಳನ್ನು ವಶಕ್ಕೆ ಪಡೆದಿದ್ದಾರೆ. ನಂತರ ಆರೋಪಿ ಮಹಿಳೆಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.