

ಮಂಗಳೂರು: ಆಧಾರ್ ಸಕ್ರಿಯಗೊಳಿಸುವ ಪಾವತಿ ವ್ಯವಸ್ಥೆ (ಎಇಪಿಎಸ್) ಮೂಲಕ ಒಂದು ಲಕ್ಷ ರೂಪಾಯಿ ಪಡೆದು ವಂಚಿಸಿರುವ ಬಗ್ಗೆ ಮಂಗಳೂರಿನ ಸೈಬರ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಮಂಗಳೂರಿನ ಉಪನೋಂದಣಾಧಿಕಾರಿ ಕಚೇರಿಯಲ್ಲಿ ನೋಂದಣಿ ಪ್ರಕಿಯೆ ವೇಳೆ ದೂರುದಾರರು ಬಯೋಮೆಟ್ರಿಕ್ ನೀಡಿದ್ದರು. ಮುದ್ರಾಂಕ ಇಲಾಖೆಯ ವೆಬ್‌ಸೈಟ್‌ನಲ್ಲಿ ದಾಖಲಾಗುವ ಆಧಾರ್ ಮಾಹಿತಿಯನ್ನು ಬಳಸಿ ಈ ರೀತಿ ವಂಚನೆ ಮಾಡಿರುವ ಸಾಧ್ಯತೆ ಇದೆ ಎಂಬ ಅನುಮಾನವನ್ನು ದೂರಿನಲ್ಲಿ ವ್ಯಕ್ತಪಡಿಸಿದ್ದಾರೆ.
ದೂರುದಾರರು ನಿರ್ದಿಷ್ಟವಾಗಿ ಸಬ್‌ರಿಜಿಸ್ಟ್ರಾರ್ ಕಚೇರಿ ಮೂಲಕವೇ ವಂಚನೆಯಾಗಿದೆ ಎಂದು ದೂರಿನಲ್ಲಿ ತಿಳಿಸಿಲ್ಲ, ಈ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಸೈಬರ್ ಪೊಲೀಸರು ಪ್ರತಿಕ್ರಿಯಿಸಿದ್ದಾರೆ.