

ಮಡಿಕೇರಿ: ತಾಲೂಕಿನ ಮೂರ್ನಾಡಿನಲ್ಲಿ ಸಿಲಿಂಡರ್ ಸ್ಫೋಟಗೊಂಡು ಮೂರು ಮನೆಗಳು ಬೆಂಕಿಗೆ ಆಹುತಿಯಾದ ದುರ್ಘಟನೆ ಬುಧವಾರ ಮಧ್ಯಾಹ್ನ ಸಂಭವಿಸಿದೆ.
ಮಂದಣ್ಣ ಎಂಬುವರಿಗೆ ಸೇರಿದ ಲೈನ್ ಮನೆಯಲ್ಲಿ ಕಾಫಿ ತೋಟದ ಕೂಲಿ ಕಾರ್ಮಿಕರು ವಾಸವಾಗಿದ್ದಾರೆ. ಕಾರ್ಮಿಕರಾದ ಸೋಮಯ್ಯ, ವಿಜಯ ಮತ್ತು ರಶ್ಮಿ ಎಂಬುವರು ಲೈನ್ ಮನೆಯಲ್ಲಿ ವಾಸಿಸುತ್ತಿದ್ದರು. ಅಡುಗೆಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮೂರು ಮನೆ ಜಖಂಗೊಂಡಿದೆ. ಮನೆಯಲ್ಲಿದ್ದ ಸಾವಿರಾರು ರೂಪಾಯಿ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮವಾಗಿದೆ.