

ವಿಜಯವಾಣಿ ಸುದ್ದಿಜಾಲ ಮಡಿಕೇರಿ
ಮಾದಾಪುರದ ಶ್ರೀಮತಿ ಡಿ. ಚೆನ್ನಮ್ಮ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಸಮಾರೋಪ ಸಮಾರಂಭ ನಡೆಯಿತು.
ಸುಂಟಿಕೊಪ್ಪ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಜಾನ್, ಪರೀಕ್ಷೆ ಸೂಕ್ತ ತಯಾರಿ ಹಾಗೂ ಪರೀಕ್ಷೆಯನ್ನು ಆತ್ಮವಿಶ್ವಾಸ ದಿಂದ ಎದುರಿಸುವ ಕುರಿತು ಉಪನ್ಯಾಸ ನೀಡಿದರು. ಬದಲಾದ ಹೊಸ ಮಾದರಿ ಪ್ರಶ್ನೆ ಪತ್ರಿಕೆ ಬಗ್ಗೆ ಮಾಹಿತಿ ನೀಡಿದರು.
ಚೆನ್ನಮ್ಮ ಸಂಸ್ಥೆ ಪ್ರಾಂಶುಪಾಲ ಚೈಯ್ಯಂಡ ಜಿ. ಮಂದಪ್ಪ, ಶ್ರೀಮತಿ ಡಿ. ಚೆನ್ನಮ್ಮ ಪದವಿ ಪೂರ್ವ ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಕರ್ನಲ್ ಬಿ.ಜಿ.ವಿ. ಕುಮಾರ್ ಇದ್ದರು. ಅದವಿಯಾ ನಿರೂಪಿಸಿದರು. ಕೆ.ವಿ. ರಾಜಸುಂದರಂ ಸ್ವಾಗತಿಸಿದರು. ಬಿಂದು ವಂದಿಸಿದರು.