

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನದ ಬೆನ್ನಲ್ಲೆ ಎಚ್ಚೆತ್ತುಕೊಂಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಖಾಸಗಿ ಕಾರ್ಯಕ್ರಮದಲ್ಲಿ ಒಗ್ಗಟ್ಟು ಪ್ರದರ್ಶನ ಮಾಡಿದ್ದಾರೆ.
ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಬ್ಯಾಡ್ಜ್ ಹಾಕಿದ ಡಿಕೆಶಿ ಕ್ಯಾಮೆರಾಗೆ ಒಟ್ಟಿಗೆ ಪೋಸ್ ನೀಡುವ ಮೂಲಕ ಒಗ್ಗಟ್ಟು ಪ್ರದರ್ಶಿಸಿದರು. ಈ ಮೂಲಕ ನಮ್ಮ ನಡುವೆ ಯಾವುದೇ ಅಸಮಾಧಾನ ಇಲ್ಲ ಎಂಬುದನ್ನು ಬಿಂಬಿಸುವ ಪ್ರಯತ್ನ ಮಾಡಿದರು.
ಕೊನೆಯ ಪಟ್ಟಿಯಲ್ಲಿ ತಮ್ಮ ಬೆಂಬಲಿಗರಿಗೆ ಟಿಕೆಟ್ ಕೈ ತಪ್ಪಿತ್ತು. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಅಸಮಾಧಾನಗೊಂಡಿದ್ದರು. ಈಗ ಒಂದು ಹೆಜ್ಜೆ ಮುಂದಕ್ಕೆ ಹೋಗಿ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಬ್ಯಾಡ್ಜ್ ಹಾಕಿ, ಕ್ಯಾಮೆರಾಗೆ ಒಟ್ಟಿಗೆ ಪೋಸ್ ನೀಡುವ ಮೂಲಕ ಡಿಕೆಶಿ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂಬ ಸಂದೇಶವನ್ನು ಸಾರಿದ್ದಾರೆ. (ದಿಗ್ವಿಜಯ ನ್ಯೂಸ್)