

ಬೆಂಗಳೂರು: ದಿನೇಶ್ ಗುಂಡೂರಾವ್ ರಾಜೀನಾಮೆ ಬಳಿಕ ಖಾಲಿಯಿದ್ದ ಕೆಪಿಸಿಸಿ ಅಧ್ಯಕ್ಷನ ಪಟ್ಟ ಮಾಜಿ ಸಚಿವ, ಶಾಸಕ ಡಿ.ಕೆ.ಶಿವಕುಮಾರ್ಗೆ ಒಲಿದಿದೆ.
ಈಶ್ವರ್ ಖಂಡ್ರೆ, ಸತೀಶ್ ಜಾರಕಿಹೊಳಿ ಹಾಗೂ ಸಲೀಂ ಅಹಮದ್ ಕಾರ್ಯಾಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ಪ್ರತಿಪಕ್ಷ ನಾಯಕ ಹಾಗೂ ಸಿಎಲ್ಪಿ ನಾಯಕನ ಸ್ಥಾನದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯನವರೇ ಮುಂದುವರಿಯಲಿದ್ದಾರೆ.
ಹಾಗೇ ವಿಧಾನಸಭಾ ಮುಖ್ಯಸಚೇತಕರಾಗಿ ಶಾಸಕ ಅಜಯ್ ಸಿಂಗ್ ಮತ್ತು ವಿಧಾನ ಪರಿಷತ್ ಮುಖ್ಯ ಸಚೇತಕರನ್ನಾಗಿ ಎಂಎಲ್ಸಿ ಎಂ.ನಾರಾಯಣ ಸ್ವಾಮಿ ಅವರನ್ನು ನೇಮಕ ಮಾಡಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಆದೇಶ ಹೊರಡಿಸಿದ್ದಾರೆ.