ಸಿದ್ದರಾಮಯ್ಯ ಸೋಲಲಿ ಎಂದು ಡಿ.ಕೆ.ಶಿವಕುಮಾರ್ ಹೋಮ ಮಾಡಿಸಿದ್ದಾರೆ: ಸಿ.ಟಿ.ರವಿ

Siddaramaiah DK Shivakumar
Published on

ದಾವಣಗೆರೆ: ಚನ್ನಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಿವಕುಮಾರ್ ಪರವಾಗಿ ದಾವಣಗೆರೆಯಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಕಾಂಗ್ರೆಸ್ ವಿರುದ್ಧ ಹೊಸ ಬಾಂಬ್​ವೊಂದನ್ನು ಸಿಡಿಸಿದ್ದಾರೆ.

ದಾವಣಗೆರೆಯ ಚನ್ನಗಿರಿಯಲ್ಲಿ ಮಾತನಾಡಿದ ಸಿ.ಟಿ.ರವಿ, ಇತ್ತೀಚೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಒಂದು ಹೋಮ ಮಾಡಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಲಲಿ ಎಂದು ಆ ಹೋಮದಲ್ಲಿ ಡಿ.ಕೆ.ಶಿವಕುಮಾರ್ ಸಂಕಲ್ಪ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಇದು ನನಗೆ ಬಂದ ಇಂಟೆಲಿಜೆನ್ಸ್ ಮಾಹಿತಿ ಎಂದಿರುವ ರವಿ, ಇದನ್ನು ನೀವು ಯಾರಿಗೂ ಹೇಳಬೇಡಿ ಎಂದು ನಾನು ಹೇಳುವುದಿಲ್ಲ ಎಂಬುದಾಗಿಯೂ ಹೇಳಿದ್ದಾರೆ. ಮಾಡಾಳ್ ವಿರೂಪಾಕ್ಷಪ್ಪ ವಿಚಾರವಾಗಿ ಮಾತನಾಡಿದ ರವಿ, ಮಾಡಾಳ್ ವಿರೂಪಾಕ್ಷಪ್ಪ ನಮ್ಮ ಪಕ್ಷದ ಮಾಜಿ ಶಾಸಕರು, ಈಗ ನಮ್ಮ ಪಕ್ಷದ ಅಭ್ಯರ್ಥಿ ಶಿವಕುಮಾರ್, ನಾನು ಶಿವಕುಮಾರ್ ಪರ ಮತಯಾಚನೆ ಮಾಡಿದ್ದೇನೆ, ನಮ್ಮ ಕಾರ್ಯಕರ್ತರಿಗೆ ಏನು ಸಂದೇಶ ಕೊಡಬೇಕೋ ಅದನ್ನು ಕೊಟ್ಟಿದ್ದೇನೆ ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net