ಆರ್ಯವೈಶ್ಯ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸ್ಥಾನ ಖಾಲಿ: ಡಿ.ಎಸ್.ಅರುಣ್

Arun D.S. (2)
Published on

ಶಿವಮೊಗ್ಗ: ಆರ್ಯವೈಶ್ಯ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸ್ಥಾನಕ್ಕೆರಾಜೀನಾಮೆ ನೀಡಿದ್ದೇನೆ. ಈಗ ಮಂಡಳಿ ಅಧ್ಯಕ್ಷ ಸ್ಥಾನ ಖಾಲಿಯಿದೆ. ಶೀಘ್ರವೇ ಸಿಎಂ ಬಸವರಾಜ ಬೊಮ್ಮಾಯಿ ನೂತನ ಅಧ್ಯಕ್ಷರ ನೇಮಕ ಮಾಡುವ ನಿರೀಕ್ಷೆಯಿದೆ ಎಂದು ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ತಿಳಿಸಿದ್ದಾರೆ.

ಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಮರು ದಿನವೇ ಆರ್ಯವೈಶ್ಯ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಪತ್ರವನ್ನು ಸಿಎಂಗೆ ಸಲ್ಲಿಸಿದ್ದೆ. ನಾನು ಅಧ್ಯಕ್ಷನಾಗಿದ್ದಾಗ ಮಂಡಳಿಯಲ್ಲಿ ಉತ್ತಮ ಕೆಲಸ ಮಾಡಿದ ತೃಪ್ತಿಯಿದೆ. ಸರ್ಕಾರ ನೀಡಿದ ಅನುದಾನ ಸದ್ಬಳಕೆಯಾಗಿದೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಆರ್ಯವೈಶ್ಯ ಅಭಿವೃದ್ಧಿ ಮಂಡಳಿಯಲ್ಲಿ ಹೊಸತನ ಅಳವಡಿಸಿದ್ದೆ. ಸಾಲ ಮಂಜೂರಾತಿಗೆ, ವಸೂಲಾತಿಗೆ ಆ್ಯಪ್ ಬಳಕೆ ಮಾಡಲಾಗುತ್ತಿದೆ. ಸಾಲ ವಸೂಲಾತಿ ಪ್ರಮಾಣವೂ ಉತ್ತಮವಾಗಿದೆ. ಮುಂದೆ ಮಂಡಳಿಗೆ ಅಧ್ಯಕ್ಷರಾಗುವವರು ಉತ್ತಮವಾಗಿ ಕಾರ್ಯನಿರ್ವಹಿಸುವ ವಿಶ್ವಾಸವಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net