ದಯವಿಟ್ಟು ಕ್ಷಮೆಯಿರಲಿ... ಮದುವೆಯಾದ ಎರಡೇ ದಿನಕ್ಕೆ ಕ್ಷಮೆಯಾಚಿಸಿದ ಡಾಲಿ Dhananjay

Daali Dhanyatha
Published on

ಬೆಂಗಳೂರು: ಸ್ಯಾಂಡಲ್​ವುಡ್​ನ ದಿ ಮೋಸ್ಟ್​ ಎಲಿಜೆಬಲ್ ಬ್ಯಾಚುಲರ್ ಎಂದೇ ಖ್ಯಾತಿ ಪಡೆದಿದ್ದ ನಟ ರಾಕ್ಷಸ ಡಾಲಿ ಧನಂಜಯ್​ (Dhananjay) ಅವರು ಫೆಬ್ರವರಿ 16ರಂದು ವೈದ್ಯೆ ಧನ್ಯತಾ ಅವರೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದು, ಅಭಿಮಾನಿಗಳು, ರಾಜಕಾರಣಿಗಳು, ಸಿನಿಮಾ ಸೇರಿದಂತೆ ಅನೇಕ ಕ್ಷೇತ್ರದ ಗಣ್ಯರು ನವಜೋಡಿಗೆ ಶುಭಹಾರೈಸಿದ್ದಾರೆ.

ಮೈಸೂರಿನ ವಸ್ತುಪ್ರದರ್ಶನ ಆವರಣದಲ್ಲಿ ನಡೆದ ಅದ್ಧೂರಿ ವಿವಾಹ ಕಾರ್ಯಕ್ರಮದಲ್ಲಿ ಡಾ. ಧನ್ಯತಾಗೆ ತಾಳಿ ಕಟ್ಟಿ ಡಾಲಿ ಧನಂಜಯ್​ (Dhananjay) ಸಾಂಸಾರಿಕ ಬದುಕಿಗೆ ಕಾಲಿಟ್ಟಿದ್ದಾರೆ. ಇದೀಗ ಮದುವೆ ನಂತರ ಮೊದಲ ಬಾರಿಗೆ ಸಾಮಾಜಿಕ ಜಾಲತಾಣದಲ್ಲಿ ಒಂದು ವಿಶೇಷ ಪೋಸ್ಟ್ ಅನ್ನು ಡಾಲಿ ಧನಂಜಯ್ ಅವರು ಹಂಚಿಕೊಂಡಿದ್ದಾರೆ.

ಎಲ್ಲರಿಗೂ ನಮಸ್ಕಾರ, ಮದುವೆಗೆ ಬಂದು ಹರಸಿದ, ಬರಲಾಗದೆ ಇದ್ದರು ಶುಭಾಶಯಗಳನ್ನು ತಿಳಿಸಿದ ಎಲ್ಲರಿಗೂ ಹೃದಯಪೂರ್ವಕ ನಮನಗಳು. ಯಾವುದೇ ತೊಂದರೆ ಆಗದೆ ಸಮಾರಂಭ ಚೆನ್ನಾಗಿ ಆಗುವಲ್ಲಿ ಕುಟುಂಬದ ಜೊತೆ ಸ್ನೇಹಿತರು, ನೆಂಟರು, ಇಷ್ಟರು, ಮಾಧ್ಯಮ, ಪೊಲೀಸ್ ಇಲಾಖೆ, ಕಾರ್ಮಿಕರು, ಅಭಿಮಾನಿಗಳಾದಿಯಾಗಿ ಸಾಕಷ್ಟು ಜನರ ಶ್ರಮವಿದೆ. ಎಲ್ಲರಿಗೂ ತುಂಬು ಅಭಿಮಾನದ ಕೃತಜ್ಞತೆಗಳು.

ತುಂಬ ಜನ ಸೇರಿದ್ದರಿಂದ, ಕೆಲವರಿಗೆ ನಮ್ಮನ್ನು ತಲುಪಲು ತೊಂದರೆಯುಂಟಾಗಿದ್ದಲ್ಲಿ, ತಲುಪಲು ಸಾಧ್ಯವಾಗಿರದಿದ್ದಲ್ಲಿ ದಯವಿಟ್ಟು ಕ್ಷಮೆಯಿರಲಿ, ಖಂಡಿತವಾಗಿಯೂ ಇನ್ನಷ್ಟು ಒಳ್ಳೆ ವಿಷಯಗಳೊಂದಿಗೆ ಮತ್ತೆ ಸಿಗುತ್ತೇವೆ. ಆಶೀರ್ವಾದವಿರಲಿ. ಇಷ್ಟೆಲ್ಲದರ ಮಧ್ಯೆ ಬಂದು ಹರಸಿದ ನನ್ನ ಚಿತ್ರರಂಗದ ಗೆಳೆಯರು , ತಾರೆಯರು, ಕಾರ್ಮಿಕರು, ಹಾಗೂ ನಮಗಾಗಿ ಕೆಲಸಕ್ಕೆ ನಿಂತ ಪ್ರೊಡಕ್ಷನ್ ಮ್ಯಾನೇಜರ್ಸ್ ತಂಡಕ್ಕೆ, ಒಟ್ಟಾಗಿ ನನ್ನ ಚಿತ್ರರಂಗದ ಕುಟುಂಬಕ್ಕೆ ಹೃಯಪೂರ್ವಕ ನಮನಗಳು. ಮದುವೆಯ ಮೆರಗು ಹೆಚ್ಚಿಸಿದ ಪ್ರೀತಿಯ ಅಭಿಮಾನಿಗಳಿಗೆ special thanks. ತಾಯಿ ಚಾಮುಂಡೇಶ್ವರಿಗೆ ಭಕ್ತಿಪೂರ್ವಕ ನಮನಗಳು ಎಂದು ನಟ ಡಾಲಿ ಧನಂಜಯ್​ ಪೋಸ್ಟ್ ಮಾಡಿದ್ದಾರೆ.

https://www.vijayavani.net/india-or-pakistan-yuvraj-singh-makes-surprise-pick-before-ind-vs-pak-clash-in-icc-champions-trophy-2025

https://www.vijayavani.net/r-ashok-slams-congress-government-over-liquor-scam

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net