

ಮೇಷ: ನಿಮ್ಮ ವೃತ್ತಿ ಜೀವನದಲ್ಲಿ ಯಶಸ್ಸು ಗೋಚರಿಸಲಿದೆ. ಸಹೋದ್ಯೋಗಿಗಳೊಂದಿಗೆ ಉತ್ತಮ ಬಾಂಧವ್ಯ ವೃದ್ಧಿ. ಹಿರಿಯರ ಹಾರೈಕೆ. ಶುಭಸಂಖ್ಯೆ: 7
ವೃಷಭ: ಸಾಂಸಾರಿಕ ಗೊಂದಲಗಳನ್ನು ತಾಳ್ಮೆಯಿಂದ ಬಗೆಹರಿಸಿ. ಧನಾತ್ಮಕ ಚಿಂತನೆಯನ್ನು ಮಾಡಿ. ಹಳೆಯ ಸ್ನೇಹಿತನ ಭೇಟಿ. ಶುಭಸಂಖ್ಯೆ: 4
ಮಿಥುನ: ಹಣಕಾಸಿನ ಪರಿಸ್ಥಿತಿ ಬಿಗಡಾಯಿಸಲಿದೆ. ವೃತ್ತಿರಂಗದಲ್ಲಿ ಸಹವರ್ತಿಗಳಿಂದ ಕಿರಿಕಿರಿ. ನಲ್ಮೆಯ ಮಿತ್ರರೊಂದಿಗೆ ಭೋಜನ. ಶುಭಸಂಖ್ಯೆ: 2
ಕಟಕ: ನಿರುದ್ಯೋಗಿಗಳಿಗೆ ಆಕಸ್ಮಿಕವಾಗಿ ಉದ್ಯೋಗ ಪ್ರಾಪ್ತಿ. ವ್ಯಾಪಾರಸ್ಥರಿಗೆ ಅಧಿಕ ಲಾಭ. ಸಾಲಗಾರರಿಂದ ತೊಂದರೆ. ಶುಭಸಂಖ್ಯೆ: 9
ಸಿಂಹ: ಅನವಶ್ಯಕ ತಿರುಗಾಟ. ಸ್ವಂತ ಗ್ರಾಮಕ್ಕೆ ಭೇಟಿ. ಕೃಷಿ ಉಪಕರಣಗಳ ಖರೀದಿಯಲ್ಲಿ ಮೋಸ ಸಾಧ್ಯತೆ. ಭೂ ವಿವಾದಕ್ಕೆ ಅಂತ್ಯ. ಶುಭಸಂಖ್ಯೆ: 1
ಕನ್ಯಾ: ಧನಲಾಭ. ಕಚೇರಿಯಲ್ಲಿ ಹಿರಿಯ ಅಧಿಕಾರಿಗಳಿಂದ ಗುಣಗಾನ. ಉದ್ಯೋಗದ ಒತ್ತಡ ಕಡಿಮೆ. ದಿನಾಂತ್ಯದಲ್ಲಿ ಶುಭವಾರ್ತೆ. ಶುಭಸಂಖ್ಯೆ: 5
ತುಲಾ: ವಿದ್ಯಾರ್ಥಿಗಳಿಗೆ ಯಶಸ್ಸು. ಉನ್ನತ ವಿದ್ಯಾಭ್ಯಾಸ ಪೂರ್ಣ. ಸಂಗಾತಿಯೊಂದಿಗೆ ವಿಹಾರ ಸಾಧ್ಯತೆ. ಆರೋಗ್ಯದಲ್ಲಿ ಸುಧಾರಣೆ. ಶುಭಸಂಖ್ಯೆ: 7
ವೃಶ್ಚಿಕ: ಮನೆ ಖರೀದಿಗೆ ನಿರ್ಧಾರ. ಭೂಮಿ ವಿವಾದದ ತೀರ್ಪ. ನಿರಾಸೆ. ಕುಟುಂಬದೊಂದಿಗೆ ಸಮಾಲೋಚನೆ. ಸಂಜೆ ಶುಭವಾರ್ತೆ. ಶುಭಸಂಖ್ಯೆ: 3
ಧನುಸ್ಸು: ಕೆಲ ಘಟನೆಗಳು ಸಹನೆಯನ್ನು ಪರೀಕ್ಷಿಸಲಿವೆ. ಸಾರ್ವಜನಿಕವಾಗಿ ಗೌರವ. ವಿವಾದ ಸಂಬಂಧ ಸ್ನೇಹಿತನಿಂದ ಸಮಾಧಾನ. ಶುಭಸಂಖ್ಯೆ: 6
ಮಕರ: ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ. ಕಚೇರಿಯಲ್ಲಿ ಸಹೋದ್ಯೋಗಿ ಮೇಲೆ ಅಸಮಾಧಾನ. ಸ್ತ್ರೀಯರಿಂದ ಧನಲಾಭ. ಶುಭಸಂಖ್ಯೆ: 8
ಕುಂಭ: ಉದ್ಯೋಗಸ್ಥ ಮಹಿಳೆಯರಿಗೆ ಬದಲಾವಣೆಯ ದಿನ. ಪತ್ನಿಯೊಂದಿಗೆ ಗುರುಮಂದಿರಕ್ಕೆ ಭೇಟಿ. ದಿನಾಂತ್ಯದಲ್ಲಿ ಶುಭವಾರ್ತೆ. ಶುಭಸಂಖ್ಯೆ:3
ಮೀನ: ಪಾಲುದಾರಿಕೆಯಲ್ಲಿ ಮೋಸ. ಹಣಕಾಸಿನ ವಿಚಾರದಲ್ಲಿ ಹಿತೈಷಿಗಳ ಸಲಹೆ ತೆಗೆದುಕೊಳ್ಳಿ. ನಿವೇಶನ ಖರೀದಿಗೆ ನಿರ್ಧಾರ. ಶುಭಸಂಖ್ಯೆ: 1