

ಮೇಷ: ಕಚೇರಿಯಲ್ಲಿ ಕೆಲಸದ ಒತ್ತಡ. ವ್ಯಾಪಾರದಲ್ಲಿ ನಷ್ಟವಾಗುವ ಸಾಧ್ಯತೆ. ಉದ್ಯೋಗ ಅರಸುವವರಿಗೆ ಶುಭ ಸುದ್ದಿ. ಶುಭಸಂಖ್ಯೆ: 3
ವೃಷಭ: ಭಾಗ್ಯ ಭಾವದ ಗ್ರಹಕೂಟದಿಂದಾಗಿ ಕಾರ್ಯಸಿದ್ದಿಸಲಿದೆ. ನಟರಿಗೆ ವಿಶೇಷ ಅವಕಾಶ. ದಿನಾಂತ್ಯದಲ್ಲಿ ಆಯಾಸ .ಶುಭಸಂಖ್ಯೆ: 3
ಮಿಥುನ: ಅನಾರೋಗ್ಯದಿಂದಾಗಿ ಅಸಮಾಧಾನ. ನಿರೀಕ್ಷಿಸಿದಂತೆ ಯಶಸ್ಸು ಸಿಗದಿರುವುದಕ್ಕೆ ಬೇಸರ. ಆತ್ಮೀಯರ ಸಲಹೆ ಅಗತ್ಯ. ಶುಭಸಂಖ್ಯೆ: 8
ಕಟಕ: ಗೃಹ ನಿರ್ಮಾಣದ ಕನಸಿನ ಸಾಕಾರ. ಪತ್ನಿಯ ಸಲಹೆಯನ್ನು ತಿರಸ್ಕರಿಸಬೇಡಿ. ಕಚೇರಿಯಲ್ಲಿ ಸಮಾಧಾನದಿಂದಿರಿ. ಶುಭಸಂಖ್ಯೆ: 9
ಸಿಂಹ: ಸಾರ್ವಜನಿಕ ಜೀವನದಲ್ಲಿ ಮನ್ನಣೆ. ರಾಜಕಾರಣಿಗಳಿಗೆ ವಿಶೇಷ ದಿನ. ಕಲಾವಿದರಿಗೆ ಅದೃಷ್ಟ. ದಿನಾಂತ್ಯದಲ್ಲಿ ಶುಭ. ಶುಭಸಂಖ್ಯೆ: 9
ಕನ್ಯಾ: ಭೂಮಿಯಿಂದ ಲಾಭ. ಪಿತ್ರಾರ್ಜಿತ ಆಸ್ತಿಗೆ ಸಂಬಂಧಪಟ್ಟಂತೆ ನ್ಯಾಯಾಲಯದಲ್ಲಿ ತೀರ್ಪ. ಅನಾರೋಗ್ಯ. ಶುಭಸಂಖ್ಯೆ: 6
ತುಲಾ: ಮಾತೃಮೂಲವಾದಂತಹ ಧನಪ್ರಾಪ್ತಿಯಾಗಲಿದೆ. ಮನೆ ಕಟ್ಟುವುದಕ್ಕೆ ಚಾಲನೆ ನೀಡುವಿರಿ. ಸರ್ಕಾರಿ ಕೆಲಸಗಳಲ್ಲಿ ವಿಘ್ನ. ಶುಭಸಂಖ್ಯೆ: 5
ವೃಶ್ಚಿಕ: ಸಹೋದರರ ಸಲಹೆಯನ್ನು ತಿರಸ್ಕರಿಸುವುದು ಸಲ್ಲದು. ಮನೆಗೆ ಅಪರೂಪದ ಅತಿಥಿಯ ಆಗಮನ. ಸುಖ ಭೋಜನ. ಶುಭಸಂಖ್ಯೆ: 2
ಧನಸ್ಸು: ಆರ್ಥಿಕ ಅಡಚಣೆ. ಮಾತಿನ ಬಗ್ಗೆ ನಿಗಾ ಇರಲಿ. ಕುಟುಂಬದಲ್ಲಿ ಅಸಮಾಧಾನ. ಸಂಗೀತಗಾರರಿಗೆ ವಿಶೇಷ ದಿನ. ಶುಭಸಂಖ್ಯೆ: 9
ಮಕರ: ದೃಢ ನಿರ್ಧಾರ ತೆಗೆದುಕೊಳ್ಳಲು ಗೊಂದಲ. ಸಂಬಂಧಿಕರಿಂದ ಸಲಹೆ. ಹಣದ ಅಪವ್ಯಯ. ಮಾರಾಟಗಾರರಿಗೆ ನಷ್ಟ. ಶುಭಸಂಖ್ಯೆ: 6
ಕುಂಭ: ವಿದ್ಯಾರ್ಥಿಗಳಿಗೆ ಕನಸಿನ ಸಾಕಾರ. ಸೋಮಾರಿತನ ನಿಮ್ಮ ಶತ್ರು ಎಂಬುದನ್ನು ನೆನಪಿನಲ್ಲಿಡಿ. ದಿನಾಂತ್ಯಕ್ಕೆ ಶುಭ. ಶುಭಸಂಖ್ಯೆ: 4
ಮೀನ : ವ್ಯಾಪಾರಸ್ಥರಿಗೆ ವಿಶೇಷ ಧನಲಾಭ ಸಾಧ್ಯತೆ. ನನೆಗುದಿಗೆ ಬಿದ್ದಿದ್ದ ಕೆಲಸಕ್ಕೆ ಚಾಲನೆ. ಸಹೋದರಿಯರ ಮನೆಗೆ ಭೇಟಿ. ಶುಭಸಂಖ್ಯೆ: 5