ನಿತ್ಯಭವಿಷ್ಯ| ಈ ರಾಶಿಯವರಿಗೆ ಇಂದು ಧನಪ್ರಾಪ್ತಿ..

nity
Published on

ಮೇಷ: ಕಚೇರಿಯಲ್ಲಿ ಒತ್ತಡದ ವಾತಾವರಣ. ವ್ಯಾಪಾರದಲ್ಲಿ ನಷ್ಟವಾದೀತು. ಉದ್ಯೋಗ ಆಕಾಂಕ್ಷಿಗಳಿಗೆ ಶುಭ ಸುದ್ದಿ. ಶುಭಸಂಖ್ಯೆ: 3

ವೃಷಭ: ಭಾಗ್ಯ ಭಾವದ ಗ್ರಹಕೂಟದಿಂದಾಗಿ ಕಾರ್ಯಸಿದ್ದಿ. ನಟರಿಗೆ ವಿಶೇಷ ಅವಕಾಶ ದೊರೆಯಲಿದೆ. ದಿನಾಂತ್ಯದಲ್ಲಿ ಆಯಾಸ. ಶುಭಸಂಖ್ಯೆ: 3

ಮಿಥುನ: ಅನಾರೋಗ್ಯದಿಂದಾಗಿ ಅಸಮಾಧಾನ. ನಿರೀಕ್ಷಿಸಿದಂತೆ ಯಶಸ್ಸು ಸಿಗದಿರುವುದಕ್ಕೆ ಬೇಸರ. ಆತ್ಮೀಯರ ಸಲಹೆ. ಶುಭಸಂಖ್ಯೆ: 8

ಕಟಕ: ಗೃಹ ನಿರ್ಮಾಣದ ಕನಸಿನ ಸಾಕಾರ. ಪತ್ನಿಯ ಸಲಹೆಯನ್ನು ತಿರಸ್ಕರಿಸಬೇಡಿ. ಕಚೇರಿಯಲ್ಲಿ ಸಮಾಧಾನದಿಂದ ವರ್ತಿಸಿ. ಶುಭಸಂಖ್ಯೆ: 9

ಸಿಂಹ: ಸಾರ್ವಜನಿಕ ಜೀವನದಲ್ಲಿ ಮನ್ನಣೆ. ರಾಜಕಾರಣಿಗಳಿಗೆ ವಿಶೇಷ ದಿನ. ಕಲಾವಿದರಿಗೆ ಅದೃಷ್ಟ. ದಿನಾಂತ್ಯಕ್ಕೆ ಶುಭಸುದ್ದಿ. ಶುಭಸಂಖ್ಯೆ: 9

ಕನ್ಯಾ: ಭೂಮಿಯಿಂದ ಲಾಭವಾಗಲಿದೆ. ಪಿತ್ರಾರ್ಜಿತ ಆಸ್ತಿಗೆ ಸಂಬಂಧಪಟ್ಟಂತೆ ನ್ಯಾಯಾಲಯದಲ್ಲಿ ತೀರ್ಪು. ಅನಾರೋಗ್ಯ. ಶುಭಸಂಖ್ಯೆ: 6

ತುಲಾ: ಮಾತೃಮೂಲವಾದಂತಹ ಧನಪ್ರಾಪ್ತಿ. ಮನೆ ಕಟ್ಟುವುದಕ್ಕೆ ಚಾಲನೆ. ಸರ್ಕಾರಿ ಕೆಲಸಗಳಲ್ಲಿ ವಿಘ್ನ ಉಂಟಾಗಿ ಬೇಸರ. ಶುಭಸಂಖ್ಯೆ: 5

ವೃಶ್ಚಿಕ: ಸಹೋದರರ ಸಲಹೆಯನ್ನು ತಿರಸ್ಕರಿಸುವುದು ಒಳ್ಳೆಯದಲ್ಲ. ಮನೆಗೆ ಅಪರೂಪದ ಅತಿಥಿಯ ಆಗಮನ. ಸುಖ ಭೋಜನ. ಶುಭಸಂಖ್ಯೆ: 2

ಧನಸ್ಸು: ಆರ್ಥಿಕ ಅಡಚಣೆ ಸಾಧ್ಯತೆ. ಮಾತಿನ ಬಗ್ಗೆ ನಿಗಾ ಇರಲಿ. ಕುಟುಂಬದಲ್ಲಿ ಅಸಮಾಧಾನ. ಸಂಗೀತಗಾರರಿಗೆ ವಿಶೇಷ ದಿನ. ಶುಭಸಂಖ್ಯೆ: 9

ಮಕರ: ಧೃಡ ನಿರ್ಧಾರ ತೆಗೆದುಕೊಳ್ಳಲು ಗೊಂದಲ. ಸಂಬಂಧಿಕರಿಂದ ಸಲಹೆ. ಹಣದ ಅಪವ್ಯಯ. ಮಾರಾಟಗಾರರಿಗೆ ನಷ್ಟ. ಶುಭಸಂಖ್ಯೆ: 6

ಕುಂಭ: ವಿದ್ಯಾರ್ಥಿಗಳಿಗೆ ಕನಸಿನ ಸಾಕಾರವಾಗಿ ಸಂತಸ. ಸೋಮಾರಿತನ ನಿಮ್ಮ ಶತ್ರು, ಚುರುಕಾಗಿ ಇರಿ. ದಿನಾಂತ್ಯದಲ್ಲಿ ಶುಭವಾರ್ತೆ. ಶುಭಸಂಖ್ಯೆ: 4

ಮೀನ : ವ್ಯಾಪಾರಸ್ಥರಿಗೆ ವಿಶೇಷ ಧನಲಾಭ. ಬಹಳ ದಿನಗಳಿಂದ ನನೆಗುದಿಗೆ ಬಿದ್ದಿದ್ದ ಕೆಲಸಕ್ಕೆ ಚಾಲನೆ. ಸಹೋದರಿಯರ ಮನೆಗೆ ಭೇಟಿ. ಶುಭಸಂಖ್ಯೆ: 5

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net