

ನಂಜನಗೂಡು: ಕೃಷಿಯನ್ನು ಅವಲಂಬಿಸಿರುವ ರೈತರು ಹೈನುಗಾರಿಕೆಯನ್ನೂ ಉಪ ಕಸುಬನ್ನಾಗಿಸಿಕೊಳ್ಳುವ ಮೂಲಕ ಆರ್ಥಿಕವಾಗಿ ಹೆಚ್ಚಿನ ಲಾಭ ಗಳಿಸಬಹುದು ಎಂದು ಶಾಸಕ ದರ್ಶನ್ ಧ್ರುವನಾರಾಯಣ ಹೇಳಿದರು.
ತಾಲೂಕಿನ ಕುರಿಹುಂಡಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಸಮೂಹ ಹಾಲು ಶೀತಲೀಕರಣ ಕೇಂದ್ರವನ್ನು ಬುಧವಾರ ಉದ್ಘಾಟಿಸಿ ಮಾತನಾಡಿದರು.
ನೂತನವಾಗಿ ನಿರ್ಮಾಣಗೊಂಡಿರುವ ಘಟಕದಲ್ಲಿ 3 ಸಾವಿರ ಲೀಟರ್ ಹಾಲು ಸಂಗ್ರಹ ಸಾಮರ್ಥ್ಯವಿದ್ದು, ಹೊಸ ಘಟಕದ ಸದುಪಯೋಗವನ್ನು ಪಡೆದುಕೊಂಡು ರೈತರು ಗುಣಮಟ್ಟದ ಹಾಲನ್ನು ಉತ್ಪಾದನೆ ಮಾಡಬೇಕು. ಇನ್ನು ಪ್ರತಿಯೊಂದು ಹಳ್ಳಿಯಲ್ಲೂ ಹಾಲು ಉತ್ಪಾದಕರ ಸಹಕಾರ ಸಂಘಗಳನ್ನು ತೆರೆಯುವ ಮೂಲಕ ರೈತರು ಆರ್ಥಿಕವಾಗಿ ಸದೃಢವಾಗಲು ಮೈಮುಲ್ ಸಹಕಾರಿ ಆಗಿದ್ದು, ರಾಜ್ಯ ಸರ್ಕಾರದಿಂದ ಕ್ಷೀರ ಭಾಗ್ಯ ಯೋಜನೆ ಮೂಲಕ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳು ಹಾಗೂ ಹಾಲು ಉತ್ಪಾದಕ ರೈತರಿಗೆ ನೆರವು ನೀಡಲಾಗುತ್ತಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಮೈಸೂರು ಜಿಲ್ಲಾ ಹಾಲು ಒಕ್ಕೂಟದ ನಿರ್ದೇಶಕರಾದ ಕೆ.ಜಿ.ಮಹೇಶ್, ಬಿ.ಎನ್.ಸದಾನಂದ, ನೀಲಾಂಬಿಕೆ ಮಹೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕುರಹಟ್ಟಿ ಮಹೇಶ್, ಶ್ರೀಕಂಠ ನಾಯಕ, ಜಿಪಂ ಮಾಜಿ ಸದಸ್ಯ ಕೆ.ಮಾರುತಿ, ಕುರಿಹುಂಡಿ ರಾಜು, ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಕೆ.ಎಸ್. ರಾಜಶೇಖರಪ್ಪ, ಉಪಾಧ್ಯಕ್ಷ ಪುಟ್ಟೇಗೌಡ, ನಿರ್ದೇಶಕರಾದ ಎಸ್.ಬಸವರಾಜು, ಎನ್.ಮಹದೇವ್, ಮಲ್ಲಿಕಾರ್ಜುನ, ಬಸವಣ್ಣ, ಮಹದೇವಪ್ಪ, ಭೋಗಯ್ಯ, ಸವಿತಾ, ಮೈಮುಲ್ ವ್ಯವಸ್ಥಾಪಕ ಬಸವರಾಜು, ಉಪವ್ಯವಸ್ಥಾಪಕ ಸಂತೋಷ್ ಕುಮಾರ್, ಸಹಾಯಕ ವ್ಯವಸ್ಥಾಪಕ ಅಕ್ಷಯ್ ಕುಮಾರ್, ಗ್ರಾಪಂ ಉಪಾಧ್ಯಕ್ಷ ಮಂಜು ನಾಯಕ್, ಸದಸ್ಯರಾದ ರಮೇಶ್, ಚಿಕ್ಕನಂಜಯ್ಯ ಮತ್ತಿತರರಿದ್ದರು.