ಸೆಲೆಬ್ರಿಟಿಗಳ ಸಾಲಿನಲ್ಲಿ ಧನಂಜಯ್, ಭವ್ಯಾ ಗೌಡ, ಆರತಿ ಪಡುಬಿದ್ರಿ, ಅಮೋಘ್, ಪ್ರತೀಕ್ಷಾ, ನಂದಿನಿ, ಅನೂಪ್, ಸ್ಮೈಲ್ ಗುರು ರಕ್ಷಿತ್, ಜಗಪ್ಪ, ಅನನ್ಯ, ಪೂಜಾ ರಮೇಶ್ ಮತ್ತು ಅಶ್ವಿನ್ ಇರಲಿದ್ದಾರೆ. ಮೊದಲ ಎಪಿಸೋಡ್‌ನಲ್ಲಿ ಸೆಲೆಬ್ರಿಟಿ ಡ್ಯಾನ್ಸರ್ಗಳು ಇರಲಿದ್ದು, ಕರ್ನಾಟಕದ ವಿವಿಧ ಭಾಗಗಳಲ್ಲಿ ನಡೆದ ಆಡಿಷನ್ನಲ್ಲಿ ಸೆಲೆಕ್ಟ್ ಆದ ಡ್ಯಾನ್ಸರ್ಗಳು ಮುಂಬರಲಿರುವ ಎಪಿಸೋಡ್ಗಳಲ್ಲಿ ಇವರಿಗೆ ಜೋಡಿಯಾಗಲಿದ್ದಾರೆ. ಯಾವ ಸೆಲೆಬ್ರಿಟಿಗೆ ಯಾರು ಜೋಡಿ ಆಗ್ತಾರೆ ಎಂಬುದು ವೀಕ್ಷಕರಲ್ಲಿ ಕುತೂಹಲ ಮೂಡಿಸಲಿದೆ.