

ಬೆಂಗಳೂರು: ( darshan and vijayalakshmi wedding anniversary ) ಸ್ಯಾಂಡಲ್ವುಡ್ ನಟ ದರ್ಶನ್ ಮತ್ತು ವಿಜಯಲಕ್ಷ್ಮೀ ಅವರ ಇಂದು (ಮೇ 19) 22ನೇ ವಿವಾಹ ವಾರ್ಷಿಕೋತ್ಸವವನ್ನು ಆಚರಿಸಲಾಗುತ್ತಿದೆ. ಈ ಜೋಡಿದ ಮುದ್ದಾದ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ಕಳೆದ ವರ್ಷ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಪತ್ನಿ ವಿಜಯಲಕ್ಷ್ಮಿ ದಂಪತಿ ದುಬೈನಲ್ಲಿ ಬಹಳ ಅದ್ಧುರಿಯಾಗಿ ತಮ್ಮ 21ನೇ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡಿದ್ದರು. ಈ ವರ್ಷ ಅವರು ರೆಸಾರ್ಟ್ವೊಂದರಲ್ಲಿ ವಿವಾಹ ವಾರ್ಷಿಕೋತ್ಸವವನ್ನು ಆಚರಿಸಿಕೊಂಡಿದ್ದಾರೆ. ಆ ಫೋಟೋಗಳನ್ನು ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ.
22ನೇ ವಿವಾಹ ವಾರ್ಷಿಕೋತ್ಸವ ಸಂಬಂಧ ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರು ಸೋಶಿಯಲ್ ಮೀಡಿಯಾದಲ್ಲಿ ಪತಿಯ ಜೊತೆಗೆ ನಿಂತುಕೊಂಡಿರೋ ಫೋಟೋವನ್ನು ಹಂಚಿಕೊಂಡಿದ್ದಾರೆ. ಅದರ ಜೊತೆಗೆ (eternally) ಶಾಶ್ವತ ಅಂತ ಬರೆದುಕೊಂಡಿದ್ದಾರೆ. ಅಭಿಮಾನಿಗಳು ಈ ಜೋಡಿಯ ಫೋಟೋಗೆ ಮೆಚ್ಚುಗೆ ಸೂಚಿಸಿ ಶುಭಕೊರಿದ್ದಾರೆ.
2003 ಮೇ 19ರಂದು ನಟ ದರ್ಶನ್ ಹಾಗೂ ವಿಜಯಲಕ್ಷ್ಮಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ನಟ ದರ್ಶನ್ ಹಾಗೂ ವಿಜಯಲಕ್ಷ್ಮಿ ಅವರು ಧರ್ಮಸ್ಥಳದ ವಸಂತ್ ಮಹಲ್‌ನಲ್ಲಿ ಮದುವೆಯಾಗಿದ್ದರು. ದರ್ಶನ್ ಹಾಗೂ ವಿಜಯಲಕ್ಷ್ಮಿ ಇಬ್ಬರ ಮದುವೆ ಆಮಂತ್ರಣ ಪತ್ರ ಕೂಡ ವೈರಲ್ ಆಗಿದೆ. ವಿಜಯಲಕ್ಷ್ಮೀ ಕೆಮಿಕಲ್ ಇಂಜಿನಿಯರ್ ಪದವೀಧರೆ. ದರ್ಶನ್-ವಿಜಯಲಕ್ಷ್ಮಿ ಪುತ್ರನ ಹೆಸರು ವಿನೀಶ್.
‘ದರ್ಶನ್ ಅವರ ವಿವಾಹ ಆಮಂತ್ರಣ ಪತ್ರ ವೈರಲ್ ಆಗಿದೆ. 19-05-2003ರ ಸೋಮವಾರ ಬೆಳಿಗ್ಗೆ 9:10ರಿಂದ 9:50ರವರೆಗಿನ ಮಿಥುನ ಲಗ್ನದಲ್ಲಿ ನಾವು ವಿವಾಹವಾಗುತ್ತಿದ್ದೇವೆ. ಧರ್ಮಸ್ಥಳದ ವಸಂತ್ ಮಹಲ್‌ನಲ್ಲಿ ಮದುವೆ ನಡೆಯಲಿದೆ. ಎಲ್ಲರೂ ಮದುವೆಗೆ ಆಗಮಿಸಬೇಕು ಎಂದು ಆಮಂತ್ರಣ ಕೋರುತ್ತಿದ್ದೇನೆ’ ಎಂಬುದಾಗಿ ಆಮಂತ್ರಣ ಪತ್ರದಲ್ಲಿ ಬರೆಯಲಾಗಿತ್ತು.