

ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿ ದರ್ಶನ್ಗೆ ಜೈಲಿನಲ್ಲಿ ಹಾಸಿಗೆ, ದಿಂಬು ಕೊಡದ ಅರ್ಜಿಗೆ ಸಂಬಂಧಿಸಿದಂತೆ ಇಂದು ನಡೆದ ವಿಚಾರಣೆಯನ್ನು ಕೋರ್ಟ್ ಮುಂದೂಡಿದೆ.
ಹೈಕೋರ್ಟ್ ಆದೇಶವಿದ್ದರೂ ಜೈಲಿನಲ್ಲಿ ದರ್ಶನ್ಗೆ ದಿಂಬು ಮತ್ತು ಹಾಸಿಗೆ ಸೌಲಭ್ಯಯನ್ನು ಒದಗಿಸಿಲ್ಲ ಎಂದು ಆರೋಪಿ ಪರ ವಕೀಲರು ವಾದಿಸಿದರು. ವಿಚಾರಣೆ ಆಲಿಸಿದ ಬೆಂಗಳೂರಿನ 57ನೇ ಸಿಸಿಎಚ್ ಕೋರ್ಟ್, ವಿಚಾರಣೆಯನ್ನು ಸೆ.19ಕ್ಕೆ ಮುಂದೂಡಿಕೆ ಮಾಡಿದೆ.