ರೇಣುಕಸ್ವಾಮಿ ಕೊಲೆ ಕೇಸ್​: ಎ2 ಆರೋಪಿ ದರ್ಶನ್​ ಜಾಮೀನು ಅರ್ಜಿ ನಾಳೆಗೆ ಮುಂದೂಡಿದ ಹೈಕೋರ್ಟ್​

darshan
Published on

ಬೆಂಗಳೂರು: ಬೆನ್ನಿನ ಶಸ್ತ್ರಚಿಕಿತ್ಸೆಯ ಮೇರೆಗೆ 6 ವಾರಗಳ ಮಧ್ಯಂತರ ಜಾಮೀನು ಪಡೆದು ಜೈಲಿನಿಂದ ಹೊರಗೆ ಬಂದಿರುವ ಆರೋಪಿ ದರ್ಶನ್​ ಜಾಮೀನು ಅರ್ಜಿಯನ್ನು ಇಂದು ವಿಚಾರಣೆ ನಡೆಸಿದ ಹೈಕೋರ್ಟ್​, ಇದೀಗ ಅರ್ಜಿ ವಿಚಾರಣೆಯನ್ನು ನಾಳೆಗೆ ಮುಂದೂಡಿದೆ.

ದರ್ಶನ್​ ಪರ ಕೋರ್ಟಿನಲ್ಲಿ ವಕೀಲ ಸಿ.ವಿ. ನಾಗೇಶ್​ ವಾದ ಮಂಡಿಸಿದ್ದು, ದರ್ಶನ್​ಗೆ ಜಾಮೀನು ಮಂಜೂರು ಮಾಡಿ ಎಂದು ಮನವಿ ಮಾಡಿದರು. ವಾದ ಆಲಿಸಿದ ನ್ಯಾಯಾಲಯ, ದರ್ಶನ್​ ಸೇರಿ 6 ಆರೋಪಿಗಳ ಜಾಮೀನು ಅರ್ಜಿ ವಿಚಾರಣೆಯನ್ನು ನ.29ಕ್ಕೆ ಮುಂದೂಡಿದೆ.

ರೇಣುಕಸ್ವಾಮಿಯನ್ನು ಬರ್ಬರವಾಗಿ ಹತ್ಯೆಗೈದ ಪ್ರಕರಣದಲ್ಲಿ ಎ1 ಆರೋಪಿ ಪವಿತ್ರಾ ಗೌಡ ಜಾಮೀನು ಅರ್ಜಿಯನ್ನು ಈ ಹಿಂದೆ ಕೋರ್ಟ್​ ವಜಾಗೊಳಿಸಿತು. ಪ್ರಸ್ತುತ ಎ2 ಆರೋಪಿ ದರ್ಶನ್​ ಮತ್ತು ಆತನ ಸಹಚರರ ಬೇಲ್​ ಅರ್ಜಿ ವಿಚಾರಣೆಯನ್ನು ನಡೆಸುತ್ತಿರುವ ಹೈಕೋರ್ಟ್​, ಸಿ.ವಿ. ನಾಗೇಶ್​ ವಾದವನ್ನು ಆಲಿಸಿದ ನಂತರ ಮತ್ತೆ ವಿಚಾರಣೆಯನ್ನು ಮುಂದೂಡಿಕೆ ಮಾಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net