

ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣ ಸಂಬಂಧ ದರ್ಶನ್ ವತ್ತು ಪವಿತ್ರಾಗೌಡ ಸೇರಿ 17 ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಮತ್ತೆ 14 ದಿನ ವಿಸ್ತರಣೆ ಮಾಡಿ ಕೋರ್ಟ್ ಆದೇಶಿಸಿದೆ.
ನ್ಯಾಯಾಂಗ ಬಂಧನ ಅವಧಿ ಮುಗಿದ ಹಿನ್ನೆಲೆಯಲ್ಲಿ ಗುರುವಾರ ನಗರದ ಎಸಿಎಂಎಂ ಕೋರ್ಟ್‌ಗೆ ಪರಪ್ಪನ ಅಗ್ರಹಾರ ಕಾರಾಗೃಹದಿಂದಲೇ ವಿಡಿಯೋ ಕಾನ್ಪರೆನ್ಸ್ನಲ್ಲಿ ದರ್ಶನ್ ಗ್ಯಾಂಗ್ ಅನ್ನು ಅಧಿಕಾರಿಗಳು ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯವು, ಜು.18ವರೆಗೆ ಬಂಧನ ಅವಧಿ ವಿಸ್ತರಿಸಿ ಆದೇಶಿಸಿತು.
ಪ್ರಕರಣದಲ್ಲಿ ಜಾಮೀನು ಸಿಗುವವರೆಗೆ ಇದೇ ರೀತಿ ಬಂಧನ ಅವಧಿ ವಿಸ್ತರಣೆ ಆಗುತ್ತಲೇ ಇರುತ್ತದೆ.