ವಿಜಯಲಕ್ಷ್ಮೀ ಹತ್ರ ಇರೋ ಕಾರೇ ನನಗೆ ಬೇಕು! ದಚ್ಚು ಬಳಿ ಹಠ ಮಾಡಿ ಪವಿತ್ರಾ ತೆಗೆದುಕೊಂಡ ಕಾರಿನ ಬೆಲೆ ಹುಬ್ಬೇರಿಸುವಂತಿದೆ..

darshan (4)
Published on

ಬೆಂಗಳೂರು: ಸ್ಯಾಂಡಲ್​ವುಡ್​​ ನಟ ದರ್ಶನ್​ ಗೆಳತಿ ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದಕ್ಕೆ ರೇಣುಕಾಸ್ವಾಮಿಯ ಕೊಲೆ ನಡೆದಿದೆ ಎನ್ನಲಾಗಿದೆ. ಇದರಲ್ಲಿ ದರ್ಶನ್​ ಕೈವಾಡ ಇದೆ. ದರ್ಶನ್​ ಸೂಚನೆ ಕೊಟ್ಟಿದ್ದಕ್ಕೆ ಹಲ್ಲೆ ಮಾಡಿದೆವು ಎಂದು ಬಂಧಿತ ಆರೋಪಿಗಳು ತಪ್ಪೊಪ್ಪಿಕೊಂಡಿರುವ ಹಿನ್ನೆಲೆಯಲ್ಲಿ ದರ್ಶನ್​ರನ್ನು ಬಂಧಿಸಲಾಗಿದೆ. ಈ ಪ್ರಕರಣದ ತನಿಖೆಯನ್ನು ಪೊಲೀಸರು ನಡೆಸುತ್ತಿದ್ದಾರೆ. ಈ ವೇಳೆ ಪವಿತ್ರಾ ಗೌಡ ಕುರಿತಾಗಿ ಸುದ್ದಿಯೊಂದು ವೈರಲ್​ ಆಗಿದೆ.

ದರ್ಶನ್​​ ಸ್ನೇಹಿತೆ ಪವಿತ್ರಾ ಗೌಡ ಅವರ ಬಿಳಿ ಬಣ್ಣದ ರೇಂಜ್ ರೋವರ್‌ ಕಾರಿದೆ. ಇದೇ ವರ್ಷದ ಮಾರ್ಚ್‌ ತಿಂಗಳ ಅಂತ್ಯದಲ್ಲಿ ಪವಿತ್ರಾ ಗೌಡ ಹೆಸರಿನಲ್ಲಿ ಈ ಕಾರು ನೋಂದಣಿಯಾಗಿದೆ. ಈ ರೇಂಜ್ ರೋವರ್‌ ಕಾರನ್ನು ಪವಿತ್ರಾ ಗೌಡಗೆ ದರ್ಶನ್‌ ಉಡುಗೊರೆಯಾಗಿ ನೀಡಿದ್ದರೆ ಎನ್ನಲಾಗಿದೆ. ಮಾರ್ಚ್ ತಿಂಗಳ ಆರಂಭದಲ್ಲಿ ರೇಂಜ್ ರೋವರ್ ಕಾರು ಖರೀದಿ ಮಾಡಿದ್ದರು ವಿಜಯಲಕ್ಷ್ಮೀ . ಅದೇ ಕಾರು ಬೇಕು ಅಂತ ಪವಿತ್ರಾ ಗೌಡ ದರ್ಶನ್​ ಬಳಿ ಹಠ ಮಾಡಿದ್ರು ಎಂಬಂತೆ ಒಂದೇ ತಿಂಗಳ ಬಳಿಕ ಪವಿತ್ರಾ ಕೂಡ ಇದೇ ಕಾರನ್ನು ಹೊಂದಿದ್ದಾರೆ.

ವಿಜಯಲಕ್ಷ್ಮಿ ಕಾರು ಖರೀದಿಸಿದ ಒಂದೇ ತಿಂಗಳಲ್ಲಿ ಪವಿತ್ರಾ ಗೌಡ ಕೈಗೂ ಸಿಕ್ಕಿತ್ತು ಅದೇ ಬ್ರ್ಯಾಂಡ್​ನ ಕಾರು, ಹೀಗಾಗಿಯೇ ಜನರೆಲ್ಲಾ ಹಾಗೆ ಮಾತನಾಡುವಂತೆ ಆಗಿತ್ತು. 2024ರ ಮಾರ್ಚ್ 28ರಂದು ಪವಿತ್ರಾಗೌಡಗೆ ನಟ ದರ್ಶನ್ ಅವರು ಬಿಳಿ ಬಣ್ಣದ ರೇಂಜ್ ರೋವರ್ ಕಾರನ್ನು ಗಿಫ್ಟ್ ನೀಡಿದ್ದಾರೆ. KA 04 NE 0777 ನಂಬರಿನ ರೇಂಜ್ ರೋವರ್ ಕಾರು 2024ರ ಮಾರ್ಚ್ 28ಕ್ಕೆ ರಿಜಿಸ್ಟರ್ ಆಗಿದೆ. ಆರ್‌ಆರ್‌ ಆರ್​ ನಗರದಲ್ಲಿ ರೆಡ್​ ಕಾರ್ಪೆಟ್ ಸ್ಟುಡಿಯೋ 777 ಎಂಬ ಶಾಪ್ ಅನ್ನು ನಟಿ ಹಾಗೂ ದರ್ಶನ್ ಸ್ನೇಹಿತೆ ಪವಿತ್ರಾ ಗೌಡ ಓಪನ್ ಮಾಡಿ ನಡೆಸುತ್ತಿದ್ದಾರೆ. ಅಷ್ಟೇ ಅಲ್ಲ, ದರ್ಶನ್ ವಾಸವಾಗಿರೋ ಆರ್‌ಆರ್‌ ನಗರದಲ್ಲೇ ಪವಿತ್ರಾ ಗೌಡ ಐಶಾರಾಮಿ ಮನೆ ಕೂಡ ಇದೆ.

ಏನಿದು ಪ್ರಕರಣ? ಫೆಬ್ರವರಿ 27ರಿಂದ ಪವಿತ್ರಾ ಗೌಡಗೆ ರೇಣುಕಾ ಸ್ವಾಮಿ ಅಶ್ಲೀಲವಾಗಿ ಮೆಸೇಜ್ ಶುರು ಮಾಡಿದ್ದರು. ಅಕೌಂಟ್‌ ಬ್ಲಾಕ್‌ ಮಾಡಿದ್ದರೂ ಹೊಸ ಅಕೌಂಟ್‌ನಿಂದ ಮತ್ತದೇ ಮಸೇಜ್ ಕಳುಹಿಸುತ್ತಿದ್ದ. ಕಳೆದ ಶುಕ್ರವಾರ ಮರ್ಮಾಂಗದ ಫೋಟೋ ಕಳುಹಿಸಿ ‘ದರ್ಶನ್​ಗಿಂತ ನಾನೇನು ಕಡಿಮೆ ಬಾ’ ಎಂದು ಹೇಳಿದ್ದ. ಈ ರೀತಿಯ ಟಾರ್ಚರ್‌ ಸಹಿಸಿಕೊಳ್ಳಲಾಗದೇ ಪವಿತ್ರಾ ಅವರು ತಮ್ಮ ಮನೆಗೆಲಸದವ ಪವನ್​ಗೆ ಹೇಳಿದ್ದರು. ಈ ವಿಚಾರ ದರ್ಶನ್​ಗೆ ತಿಳಿದಿದೆ.

ರೇಣುಕಾ ಸ್ವಾಮಿಯನ್ನು ಚಿತ್ರದುರ್ಗದಿಂದ ಅಪಹರಣ ಮಾಡಿ ಕರೆದುಕೊಂಡು ಬಂದು ಶೆಡ್​ನಲ್ಲಿ ಇರಿಸಿಕೊಂಡು ಹಲ್ಲೆ ಮಾಡಿದ್ದ ದರ್ಶನ್ ಮತ್ತು ಗ್ಯಾಂಗ್​, ಹಲ್ಲೆಯಿಂದ ರೇಣುಕಾ ಸ್ವಾಮಿ ನಿಧನ ಹೊಂದಿದ ಬಳಿಕ ಆತಂಕಗೊಂಡು, ಶವವನ್ನು ಸಾಗಿಸುವ ದಾರಿ ಹುಡುಕಿದೆ. ಆಗ ಬೇರೆ ಗ್ಯಾಂಗ್ ಒಂದನ್ನು ಕರೆಸಿ ಅವರಿಗೆ ಶವ ಒಪ್ಪಿಸಿ, ಅದನ್ನು ವಿಲೇವಾರಿ ಮಾಡುವಂತೆ ಹೇಳಿ ಅವರಿಗೆ 30 ಲಕ್ಷ ರೂಪಾಯಿ ಹಣ ನೀಡಿದ್ದಾರೆ. ಈ ಹಣವನ್ನು ದರ್ಶನ್ ಅವರೇ ನೀಡಿದ್ದಾರೆ ಎನ್ನಲಾಗುತ್ತಿದೆ.

ಹಣ ಪಡೆದ ಮತ್ತೊಂದು ಗ್ಯಾಂಗ್ ರೇಣುಕಾ ಸ್ವಾಮಿಯ ಶವವನ್ನು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸುಮನಹಳ್ಳಿ ಮೋರಿಗೆ ಬಿಸಾಡಿ ಹೋಗಿದ್ದಾರೆ. ಶವ ದೊರೆತ ಬಳಿಕ ತಾವೇ ಕೊಲೆ ಮಾಡಿರುವುದಾಗಿ ಹೇಳಿ ಠಾಣೆಗೆ ಒಪ್ಪಿಕೊಂಡಿದ್ದಾರೆ. ಕೊಲೆ ಮಾಡಲು ಹಣಕಾಸಿನ ವಿಚಾರವೇ ಕಾರಣ ಎಂದು ಹೇಳಿದ್ದಾರೆ. ಆದರೆ ಒಬ್ಬೊಬ್ಬರನ್ನೂ ಪ್ರತ್ಯೇಕವಾಗಿ ವಿಚಾರಣೆ ಮಾಡಿದಾಗ ಅವರ ಹೇಳಿಕೆಯಲ್ಲಿ ವ್ಯತ್ಯಾಸ ಕಂಡು ಬಂದಿದೆ. ಬಳಿಕ ಪೊಲೀಸರು ತಮ್ಮದೇ ಶೈಲಿಯಲ್ಲಿ ವಿಚಾರಣೆ ಮಾಡಿದಾಗ ನಿಜಾಂಶ ಬಯಲಾಗಿದೆ.

ಹಣ ಪಡೆದು ಶವ ವಿಲೇವಾರಿ ಜವಾಬ್ದಾರಿ ಹೊತ್ತಿದ್ದ ಗ್ಯಾಂಗ್, ದರ್ಶನ್​ರ ಆಪ್ತನೊಟ್ಟಿಗೆ ಸಂಪರ್ಕದಲ್ಲಿತ್ತಂತೆ. ಶವ ವಿಲೇವಾರಿ ಹಾಗೂ ಕೊಲೆಯ ಆರೋಪ ಹೊರಲೆಂದು ಮುಂಚಿತವಾಗಿಯೇ 30 ಲಕ್ಷ ರೂಪಾಯಿ ಹಣವನ್ನು ದರ್ಶನ್ ಅವರಿಂದ ಈ ಗ್ಯಾಂಗ್ ಪಡೆದಿತ್ತು ಎನ್ನಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net