

ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ನಟ ದರ್ಶನ್ ಮತ್ತು ಗ್ಯಾಂಗ್‌ಗೆ 14 ದಿನ ನ್ಯಾಯಾಂಗ ಬಂಧನ ವಿಸ್ತರಿಸಿ 24ನೇ ಎಸಿಎಂಎಂ ಕೋರ್ಟ್ ಆದೇಶಿಸಿದೆ.
ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ 13 ಆರೋಪಿಗಳು ಮತ್ತು ತುಮಕೂರು ಜೈಲಿನಲ್ಲಿರುವ ನಾಲ್ವರನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಪೊಲೀಸರು ಕೋರ್ಟ್‌ಗೆ ಹಾಜರುಪಡಿಸಿದರು.
ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ವಹಿಸುವಂತೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಕೋರ್ಟ್ ಆದೇಶ ನೀಡಿತು. ಮತ್ತೊಂದೆಡೆ ನಟ ದರ್ಶನ್ ಮನೆಯೂಟ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಏಕಸದಸ್ಯ ಪೀಠ ಆ.20ಕ್ಕೆ ಮುಂದೂಡಿದೆ.