Darshan : ಸರ್ಜರಿ ಇಲ್ಲದೆ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿರುವ ದರ್ಶನ್​

darshan bail postponed
Published on

ಬೆಂಗಳೂರು:   ದರ್ಶನ್ ( Darshan  )  ತಮ್ಮ ಗೆಳತಿ ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದ್ದ ಎಂಬ ಕಾರಣಕ್ಕಾಗಿ, ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಎಂಬ ವ್ಯಕ್ತಿಯನ್ನು ಪಟ್ಟಣಗೆರೆ ಶೆಡ್‌ಗೆ ಕರೆಸಿ ಕೊಲೆ ಮಾಡಿದ್ದಾರೆ ಎನ್ನುವ ಆರೋಪದಲ್ಲಿ ಜೈಲು ಸೇರಿದ್ದ ದರ್ಶನ್​ ಅವರು ಬೆನ್ನು ನೋವಿನ ಕಾರಣ ನಿಡಿ ಮಧ್ಯಂತರ ಜಾಮೀನು ಪಡೆದಿದ್ದರು.

ಕಳೆದ ಒಂದೂವರೆ ತಿಂಗಳಿಂದ ಅವರು ಆಸ್ಪತ್ರೆಯಲ್ಲಿಯೇ ಇದ್ದರು. ಈಗ ಜಾಮೀನು ಸಿಗುತ್ತಿದ್ದಂತೆ ವೈದ್ಯರ ಸಲಹೆ ಪಡೆದು ಆಸ್ಪತ್ರೆಯಿಂದ ಹೊರ ಬಂದಿದ್ದಾರೆ. ಡಿಸ್ಚಾರ್ಜ್ ಆಗಿ  ನೇರವಾಗಿ ಹೊಸಕೆರೆಹಳ್ಳಿಯಲ್ಲಿರುವ ಪತ್ನಿ ವಿಜಯಲಕ್ಷ್ಮೀ ಮನೆಗೆ ತೆರಳಿದ್ದಾರೆ.

ದರ್ಶನ್​ಗೆ ಶಸ್ತ್ರಚಿಕಿತ್ಸೆ ಮಾಡಿಸದೇ ಇದ್ದರೆ ಪಾರ್ಶ್ವವಾಯು ಆಗುತ್ತದೆ ಎಂದು ವೈದ್ಯರು ವರದಿ ನೀಡಿದ್ದರು. ಇದೇ ವರದಿ ನೀಡಿ ದರ್ಶನ್ ಅವರು ಮಧ್ಯಂತರ ಜಾಮೀನು ಪಡೆದು ಆಸ್ಪತ್ರೆ ಸೇರಿದ್ದರು. ಒಂದೂವರೆ ತಿಂಗಳು ಕಳೆದರೂ ದರ್ಶನ್ ಯಾವುದೇ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿಲ್ಲ. ‘ಬಿಪಿ ಕಾರಣಕ್ಕೆ ಶಸ್ತ್ರಚಿಕಿತ್ಸೆ ಆಗಿಲ್ಲ’ ಎಂದು ದರ್ಶನ್ ಪರ ವಕೀಲರು ಹೇಳಿದ್ದರು. ಈಗ ದರ್ಶನ್ ಅವರು ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳದೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net