‘ನಂಗೆ ಸ್ವಲ್ಪ ವಿಷ ಕೊಡಿ’ ಜಡ್ಜ್​ ಎದುರು ಕಣ್ಣೀರಿಟ್ಟ ದರ್ಶನ್...Darshan

Darshan Arrest
Published on

ಬೆಂಗಳೂರು:  ರೇಣುಕಾ ಸ್ವಾಮಿ ಕೊಲೆ  ಪ್ರಕರಣದಲ್ಲಿ ಜೈಲು ಸೇರಿರುವ ಆರೋಪಿ ನಟ  ( Darshan ) ದರ್ಶನ್  ಜೈಲಿನ ನರಕಯಾತನೆ ತಾಳಲಾರದೆ ಜಡ್ಜ್​ ಎದುರು ದರ್ಶನ್ ಅಳಲು ತೋಡಿಕೊಂಡಿದ್ದಾರೆ ಎನ್ನಲಾಗಿದೆ.

‘ನಾನು ಬಿಸಿಲು ನೋಡಿ 30 ದಿನಗಳಾಗಿವೆ. ಕೈ ಎಲ್ಲಾ ಫಂಗಸ್ ಬಂದಿದೆ. ಬೇರೆ ಯಾರಿಗೂ ಬೇಡ ನನಗೆ ಮಾತ್ರ ಪಾಯಿಸನ್ ನೀಡಲಿ. ಕೋರ್ಟ್​​ನಿಂದಲೇ ಈ ಆದೇಶ ನೀಡಬೇಕು’ ಎಂದು ದರ್ಶನ್ ಮನವಿ ಮಾಡಿದ್ದಾರೆ. ಆಗ ಜಡ್ಜ್ ‘ಹಾಗೆಲ್ಲಾ ನೀವು ಕೇಳುವಂತಿಲ್ಲ’ ಜಡ್ಜ್  ದರ್ಶನ್​ಗೆ ಕಿವಿ ಮಾತು ಹೇಳಿದ್ದಾರೆ.

‘ಜೈಲು ಅಧಿಕಾರಿಗಳಿಗೆ ಯಾವ ಆದೇಶ ನೀಡಬೇಕೋ ನೀಡುತ್ತೇವೆ. ನಿಮ್ಮ ಮನವಿ ಬಗ್ಗೆ ಮಧ್ಯಾಹ್ನ ಆದೇಶ ನೀಡುತ್ತೇವೆ’ ಎಂದು ವಿಚಾರಣೆಯನ್ನು 3 ಗಂಟೆಗೆ ಮುಂದೂಡಿದ್ದಾರೆ.

ನಡೆದಿದ್ದೇನು?:  ಸ್ನೇಹಿತೆ ಪವಿತ್ರಾ ಗೌಡ ಅವರಿಗೆ ಅಶ್ಲೀಲ ಸಂದೇಶ ಕಳುಹಿಸಿದ್ದಾನೆ ಎನ್ನುವ ಹಿನ್ನೆಲೆಯಲ್ಲಿ ಚಿತ್ರದುರ್ಗದ ರೇಣುಕಾ ಸ್ವಾಮಿಯನ್ನು ದರ್ಶನ್​ ಹಾಗೂ ಪವಿತ್ರ ಗೌಡ ಗ್ಯಾಂಗ್​ ಜತೆ ಸೇರಿ ಕೊಲೆ ಮಾಡಿದ್ದರು.  ಈ  ಆರೋಪದ ಹಿನ್ನಲೆಯಲ್ಲಿ ಜೈಲು ಸೇರಿದ್ದಾರೆ.

ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ದರ್ಶನ್ ಕಳೆದ ವರ್ಷ ಅರೆಸ್ಟ್ ಆಗಿದ್ದರು. ಆ ಬಳಿಕ ಅವರಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ನೀಡಿತ್ತು. ಇದನ್ನು ಕರ್ನಾಟಕ ಸರ್ಕಾರ  ಸುಪ್ರೀಂಕೋರ್ಟ್​​ನಲ್ಲಿ ಪ್ರಶ್ನೆ ಮಾಡಿತ್ತು.  ಸುಪ್ರೀಂಕೋರ್ಟ್​ ದರ್ಶನ್ ಅವರ ಜಾಮೀನನ್ನು ರದ್ದು ಮಾಡಿ,  ಯಾವುದೇ ವಿಶೇಷ ಸವಲತ್ತು ಸಿಗಬಾರದು ಎಂದು ಎಚ್ಚರಿಸಿತ್ತು.

ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ವಿಶೇಷ ಸವಲತ್ತು ಸಿಗದಂತೆ ನೋಡಿಕೊಳ್ಳಲಾಗುತ್ತಿದೆ.  ಹೆಚ್ಚುವರಿ ದಿಂಬು ಹಾಗೂ ಬೇಡ್​​ಶೀಟ್​ಗಾಗಿ ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ದರ್ಶನ್ ಅರ್ಜಿ ಸಲ್ಲಿಸಿದ್ದಾರೆ.  ಈ ಅರ್ಜಿ ವೇಳೆ ವಿಡಿಯೋ ಕಾಲ್​ ಮೂಲಕ ದರ್ಶನ್ ವಿಚಾರಣೆಗೆ ಹಾಜರಾದರು. ಆಗ ಅಲ್ಲಿನ ಕಠಿಣ ನಿಯಮಗಳಿಂದ  ನರಕಯಾತನೆ ಉಂಟಾಗುತ್ತಿರುವುದರಿಂದ ದರ್ಶನ್​  ನಗೆ ಮಾತ್ರ ಪಾಯಿಸನ್ ನೀಡಲಿ. ಕೋರ್ಟ್​​ನಿಂದಲೇ ಈ ಆದೇಶ ನೀಡಬೇಕು ಎಂದು ಜಡ್ಜ್ ಮುಂದೆ ಹೇಳಿದ್ದಾರೆ ಎನ್ನಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net