

ಶಿವಮೊಗ್ಗ: ದಲಿತ ಸಂಷರ್ಘ ಸಮಿತಿ ಸಂಸ್ಥಾಪಕ ಪ್ರೊ.ಬಿ.ಕೃಷ್ಣಪ್ಪ ಅವರ 87ನೇ ಜನ್ಮದಿನ ಹಾಗೂ ರಾಜ್ಯಮಟ್ಟದ ಪದಾಧಿಕಾರಿಗಳ ಸಮಾವೇಶವನ್ನು ಜೂ.9ರಂದು ಬೆಳಗ್ಗೆ 11ಕ್ಕೆ ಸರ್ಕಾರಿ ನೌಕರರ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿ ರಾಜ್ಯ ಸಂಚಾಲಕ ಎಂ.ಗುರುಮೂರ್ತಿ ಹೇಳಿದರು.
ಸಮಾವೇಶವನ್ನು ಪ್ರಗತಿಪರ ಚಿಂತಕ ದಿನೇಶ್ ಅಮೀನ್‌ಮಟ್ಟು ಉದ್ಘಾಟಿಸುವರು. ಎಂಎಲ್‌ಸಿ ಬಲ್ಕಿಷ್ ಬಾನು, ಮಾಜಿ ಎಂಎಲ್‌ಸಿ ಆಯನೂರು ಮಂಜುನಾಥ, ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ, ವಿಶ್ರಾಂತ ಪ್ರಾಧ್ಯಾಪಕ ಡಾ. ಸಣ್ಣರಾಮ, ಕರ್ನಾಟಕ ದಲಿತ ನೌಕರರ ಒಕ್ಕೂಟದ ಜಿಲ್ಲಾಧ್ಯಕ್ಷ ಪ್ರೊ. ಬಿ.ಎಲ್.ರಾಜು, ಸಮಿತಿ ರಾಜ್ಯ ಸಂಘಟನಾ ಸಂಚಾಲಕ ಹನುಮಂತಪ್ಪ ಕಾಕರಗಲ್, ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ, ಜಿಲ್ಲಾ ಸಂಚಾಲಕ ಎಂ.ಏಳುಕೋಟಿ ಮುಖ್ಯ ಅತಿಥಿಗಳಾಗಿರುವರು ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಸಾವಿರಾರು ವಿದ್ಯಾರ್ಥಿಗಳ ನೆಚ್ಚಿನ ಮೇಷ್ಟ್ರು, ಬಡವರು ಮತ್ತು ನೋಂದವರ ಆಶಾಕಿರಣ, ದಲಿತ ಚಳುವಳಿಯ ಸಂಸ್ಥಾಪಕರೂ ಆದ ಕೃಷ್ಣಪ್ಪ ಅವರ ಜನ್ಮದಿಂದು ಪದಾಧಿಕಾರಿಗಳ ಸಮಾವೇಶ ಹಮ್ಮಿಕೊಳ್ಳಲಾಗಿದೆ. ರಾಜ್ಯದ ಎಲ್ಲ ಜಿಲ್ಲೆಗಳಿಂದ ಸಾವಿರಕ್ಕೂ ಅಧಿಕ ರಾಜ್ಯ ಪದಾಧಿಕಾರಿಗಳು, ಮಹಿಳಾ ಒಕ್ಕೂಟದ ಪದಾಧಿಕಾರಿಗಳು, ಜಿಲ್ಲಾ ಮತ್ತು ತಾಲೂಕು ಪದಾಧಿಕಾರಿಗಳು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದರು.
ಸಮಿತಿ ರಾಜ್ಯ ಕಾರ್ಯಕಾರಿ ಸದಸ್ಯ ಶಿವಬಸಪ್ಪ, ಜಿಲ್ಲಾ ಸಂಚಾಲಕ ಎಂ.ಏಳುಕೋಟಿ, ಚಂದ್ರಪ್ಪ, ಹರಿಗೆ ರವಿ, ಕೃಷ್ಣ ಬೊಮ್ಮನಕಟ್ಟೆ, ಹನುಮಂತಪ್ಪ ಯಡವಾಲ, ಶ್ರೀನಿವಾಸ್, ರಾಜಶೇಖರ್, ವೆಂಕಟೇಶ್, ಮನ್ಸೂರ್ ಲಕ್ಕವಳ್ಳಿ ಸುದ್ದಿಗೋಷ್ಠಿಯಲ್ಲಿದ್ದರು.